ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

ಸುದ್ದಿ ಸಂಗ್ರಹ

ಸುದ್ದಿ ಸಂಗ್ರಹ ನೆಲಮಂಗಲ
ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ಖಚಿತ ಮಾಹಿತಿ ಮೇರೆಗೆ ನೆಲಮಂಗಲ ಡಿವೈಎಸ್‌ಪಿ ಉಮಾರಾಣಿ ನೇತೃತ್ವದಲ್ಲಿ ಪೊಲೀಸರ ತಂಡ ದಾಳಿ ಮಾಡಿ ಜಾನುವಾರುಗಳ ರಕ್ಷಣೆ ಮಾಡಿದೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿಯ ಕೂತಗಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ರಾತ್ರಿ ಎರಡು ಗಂಟೆ ಸುಮಾರಿಗೆ ಜಾನುವಾರುಗಳ ರಕ್ಷಣೆ ಮಾಡಲಾಗಿದೆ.

70 ಎಮ್ಮೆಗಳು, 3 ಹಸುಗಳನ್ನು ಲಾರಿಯಲ್ಲಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಲಾರಿ ಮತ್ತು ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ ಪೊಲೀಸರು ವಿಚಾರಣೆ ನಡೆಸಿ ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *