ಕಾಳಗಿ: ನಕಲಿ ವೈದ್ಯರ ಹಾವಳಿಗೆ ಕಡಿವಾಣ ಹಾಕಿ

ಸುದ್ದಿ ಸಂಗ್ರಹ

ಸುದ್ದಿ ಸಂಗ್ರಹ ಕಾಳಗಿ
ನಕಲಿ ವೈದ್ಯರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದರಿಂದ ಜನಸಮಾನ್ಯರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೆ ನಕಲಿ ವೈದ್ಯರಿಗೆ ಕಡಿವಾಣ ಹಾಕಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಅಬ್ದುಲ್ ರೌಫ್ ಒತ್ತಾಯಿಸಿದ್ದಾರೆ.

ತಾಲೂಕಿನ ಅನೇಕ ಹಳ್ಳಿಗಳಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಯಾವುದೆ ವೈದ್ಯಕೀಯ ಪದವಿ, ನೊಂದಣಿ ಮತ್ತು ಸೂಕ್ತ ಅರ್ಹತೆ ಇಲ್ಲದೆ ಅನೇಕ ವ್ಯಕ್ತಿಗಳು ಕ್ಲಿನಿಕಗಳನ್ನು ತೆರೆದು ಗ್ರಾಮೀಣ ಭಾಗದ ಮುಗ್ಧ ಜನರ ಆರೋಗ್ಯ ಮತ್ತು ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ, ಯಾವುದೆ ಅನುಮತಿಯಿಲ್ಲದೆ ಆಸ್ಪತ್ರೆ ತೆರೆದು ಸ್ಟೀರಾಯ್ಡ್, ಗ್ಲುಕೋಸ್ ಅನಗತ್ಯ ಇಂಜೆಕ್ಷನಗಳನ್ನು ನೀಡುವ ಮೂಲಕ ರೋಗಿಗಳ ಪ್ರಾಣಕ್ಕೆ ಕಂಟಕ ತರುತ್ತಿದ್ದಾರೆ, ನಕಲಿ ವೈದ್ಯರು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಔಷಧ ರೋಗಿಗಳಿಗೆ ನೀಡುವ ಮೂಲಕ ಔಷಧಗಳಿಗೆ ದಾಸರಾಗುವಂತೆ ಮಾಡುತ್ತಿದ್ದಾರೆ, ಇದರಿಂದ ವ್ಯತಿರಿಕ್ತ ಪರಿಣಾಮ ಬೀರುವ ಸಂಭವವಿರುತ್ತದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮತ್ತು ಮುಗ್ಧ ಜನರ ಜೀವ ಉಳಿಸುವ ನಿಟ್ಟಿನಲ್ಲಿ ತಾವು ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದರು.

ತಾಲೂಕು ಆರೋಗ್ಯ ಅಧಿಕಾರಿಗಳ ನೇತ್ರತ್ವದಲ್ಲಿ ವಿಶೇಷ ತಂಡ ರಚಿಸಿ ತಾಲೂಕಿನಾದ್ಯಾಂತ ತಕ್ಷಣವೇ ದಾಳಿ ನಡೆಸಬೇಕು, ಎಮ್’ಬಿ’ಬಿ’ಎಸ್ ಹಾಗೂ ಕರ್ನಾಟಕ ವೈದ್ಯಕೀಯ ಮಂಡಳಿಯ ಕೆ’ಎಮ್’ಸಿ ನೊಂದಣಿ ಇಲ್ಲದೆ ಕ್ಲಿನಿಕ್ ನಡೆಸುತ್ತಿರುವ ನಕಲಿ ವೈದ್ಯರ ವಿರುದ್ಧ ಎಫ್’ಐ’ಆರ್ ದಾಖಲಿಸಬೇಕು. ಸಾರ್ವಜನಿಕರಲ್ಲಿ ನಕಲಿ ವೈದ್ಯರ ಬಗ್ಗೆ ಅರಿವು ಮೂಡಿಸಿ, ಅಧಿಕೃತ ವೈದ್ಯರಿಂದ ಮಾತ್ರ ಚಿಕಿತ್ಸೆ ಪಡೆಯುವಂತೆ ಜಾಗೃತಿ ಮೂಡಿಸಬೇಕು. ಜನಸಾಮಾನ್ಯರ ಜೀವ ರಕ್ಷಣೆಗಾಗಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಶೀಘ್ರದಲ್ಲಿಯೇ ಸೂಕ್ತ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗಿ ತಮ್ಮಲ್ಲಿ ವಿನಂತಿಸುತ್ತೆನೆ, ಒಂದು ವೇಳೆ ಮನವಿ ಪತ್ರಕ್ಕೆ ಸ್ಪಂದಿಸದ್ದಿರೆ ಕರ್ನಾಟಕ ರಕ್ಷಣಾ ವೇದಿಕೆ ಕಾಳಗಿ ತಾಲೂಕ ಘಟಕದ ವತಿಯಿಂದ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *