ಸುದ್ದಿ ಸಂಗ್ರಹ ಕಲಬುರಗಿ
2011ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಕುಲದೀಪಕುಮಾರ್ ಆರ್. ಜೈನ್ ಅವರನ್ನು ಕಲಬುರಗಿಯ ನೂತನ ಪೊಲೀಸ್ ಕಮಿಷನರ್ ಆಗಿ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಕುಲದೀಪ್ ಅವರು ಸದ್ಯ ಬೆಂಗಳೂರು ನಗರ ಪೊಲೀಸ್ನ ಆಡಳಿತ ವಿಭಾಗದ ಜಂಟಿ ಆಯುಕ್ತರಾಗಿದ್ದರು.
ಕಲಬುರಗಿ ಕಮಿಷನರ್ ಆಗಿದ್ದ ಶರಣಪ್ಪ ಎಸ್ ಡಿ ಅವರನ್ನು ರೈಲ್ವೆ ವಿಭಾಗದ ಡಿಐಜಿ ಹುದ್ದೆಗೆ ವರ್ಗಾಯಿಸಲಾಗಿದೆ. ಶರಣಪ್ಪ ಅವರು 2024ರ ಆಗಸ್ಟ್ 22ರಿಂದ ಕಲಬುರಗಿ ಪೊಲೀಸ್ ಕಮಿಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇನ್ನು, ಕಲಬುರಗಿ ಪೊಲೀಸ್ ತರಬೇತಿ ಶಾಲೆಯ ಪ್ರಾಚಾರ್ಯರಾಗಿದ್ದ 2012ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಎಂ.ಪುಟ್ಟಮಾದಯ್ಯ ಅವರನ್ನು ದಕ್ಷಿಣ ವಲಯ ಡಿಐಜಿಯಾಗಿ ಮೈಸೂರಿಗೆ ವರ್ಗಾಯಿಸಲಾಗಿದೆ.