ಬೃಹತ್ ರಕ್ತದಾನ ಶಿಬಿರದಲ್ಲಿ 28ನೇ ಬಾರಿ ರಕ್ತದಾನ ಮಾಡಿದ ಕೆ.ಜಿ.ಐ.ಡಿ ಅಧೀಕ್ಷಕ ಸಿದ್ದಲಿಂಗಯ್ಯ ಮಠಪತಿ ರವರಿಗೆ ರಾಜ್ಯ ಸರಕಾರಿ ನೌಕರರ ಸಂಘದಿಂದ ಕೃತಜ್ಞತೆ.
ಕಲಬುರಗಿ: ಕರ್ನಾಟಕ ರಾಜ್ಯ ಏಡ್ಸ್ ಪ್ರೀವೆನ್ಷನ್ ಸೊಸೈಟಿ, ಕರ್ನಾಟಕ ರಾಜ್ಯ ರಕ್ತ ಚಾಲನಾ ಪರಿಷತ್, ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಮ್ಸ್ ಮಹಾವಿದ್ಯಾಲಯ, ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ರೆಡಕ್ರಾಸ್ ಘಟಕ ಹಾಗೂ ಭಾರತೀಯ ರೆಡಕ್ರಾಸ್ ಜಿಲ್ಲಾ ಶಾಖೆ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರದಲ್ಲಿ 53 ಬಾರಿ ರಕ್ತದಾನ ಮಾಡಿ ಸಮಾಜಕ್ಕೆ ಮಾದರಿಯಾಗಿರುವ ನಿವೃತ್ತ ಸರಕಾರಿ ನೌಕರ, ಭಾರತೀಯ ರೆಡಕ್ರಾಸ್ ಸಂಸ್ಥೆಯ 70 ವರ್ಷದ ರವೀಂದ್ರ ಶಾಬಾದಿ ಮತ್ತು 28 ಬಾರಿ ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸಲು ಕಾರಣೀಕರ್ತರಾದ ಕಲಬುರಗಿ ಕೆ.ಜಿ.ಆಯ್.ಡಿ ಇಲಾಖೆಯ ಅಧೀಕ್ಷಕ ಮತ್ತು ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗಯ್ಯ ಮಠಪತಿ ರವರಿಗೆ ಹಾಗೂ 25 ಬಾರಿ ರಕ್ತದಾನ ಮಾಡಿದ ಸಮಾಜ ಸೇವಕ ನಾಗೇಶ ಓಂಕಾರ ಅವರುಗಳಿಗೆ ಜಿಲ್ಲಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಇತ್ತೀಚೆಗೆ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಗೌರವಿಸಿದ್ದಕ್ಕಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ಅಧ್ಯಕ್ಷರಾದ ಬಸವರಾಜ ಬಂಡಗಿ ಮತ್ತು ಪದಾಧಿಕಾರಿಗಳಾದ ಚಂದ್ರಕಾಂತ ಏರಿ, ಶ್ರೀಮಂತ ಪಟ್ಟೇದಾರ, ಧರ್ಮರಾಯ ಜವಳಿ, ಕೃಷ್ಣಾಚಾರಿ, ಸುರೇಶ ವಗ್ಗೆ ಹಾಗೂ ಸರ್ವ ಪದಾಧಿಕಾರಿಗಳು, ನಿರ್ದೇಶಕರು ಹರ್ಷ ವ್ಯಕ್ತಪಡಿಸಿ ರಕ್ತದಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.