ಸುದ್ದಿ ಸಂಗ್ರಹ ಶಹಾಬಾದ್
ಗಿರಿಶಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ವತಿಯಿಂದ 71ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ 2026ನೇ ಸಾಲಿನ ಸಂಗೀತ ಕಲಾ ಸಂಭ್ರಮ ಹಾಗೂ ಗಿರಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ನ.28ರಂದು ಶನಿವಾರ ಬೆಳಿಗ್ಗೆ 10.30ಕ್ಕೆ ನಗರದ ಜಗದಂಬಾ ದೇವಸ್ಥಾನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಮರಲಿಂಗ ಯಾದಗಿರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕಾರ್ಯಕ್ರಮವನ್ನು ಶಾಸಕ ಬಸವರಾಜ ಮತ್ತಿಮೂಡ ಉದ್ಘಾಟಿಸಲಿದ್ದಾರೆ. ರಾವೂರಿನ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಪತ್ರಕರ್ತ ಲೋಹಿತ ಕಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಸಾಹಿತ್ಯ, ಸಂಗೀತ, ಕಲೆ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 15 ಸಾಧಕರಿಗೆ ಗಿರಿಸಿರಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಗಿರಿಸಿರಿ ಕಲಾ ಸಂಸ್ಥೆಯ ತಾಲೂಕು ಅಧ್ಯಕ್ಷ ಅನಿಲ ಮೈನಾಳಕರ, ಶಿವಲಿಂಗಪ್ಪ ಹೆಬ್ಬಾಳ್ಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.