ರಾಜ್ಯದ 254 ನಗರ ಕ್ಷೇಮ ಕೇಂದ್ರದಲ್ಲಿ ಮತ್ತು 39 ಬಸ್ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ

ರಾಜ್ಯ ಸುದ್ದಿ ಸಂಗ್ರಹ ವಿಶೇಷ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 254 ನಗರ ಕ್ಷೇಮ ಕೇಂದ್ರಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಗುರುವಾರ ನಡೆದ ಸಂಪುಟ ಸಭೆಯಲ್ಲಿ 108.36 ಕೋಟಿ ವೆಚ್ಚದಲ್ಲಿ ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ 254 ಹಾಗೂ KSRTC ಬಸ್ ನಿಲ್ದಾಣಗಳಲ್ಲಿ 39 ನಮ್ಮ ಕ್ಲಿನಿಕ್ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

39.37 ಕೋಟಿ ವೆಚ್ಚದಲ್ಲಿ ಉಡುಪಿ ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಲ್ಲಿ 50 ಹಾಸಿಗೆಯ ತೀವ್ರ ನಿಗಾ ಆರೈಕೆ ಘಟಕಗಳ ನಿರ್ಮಾಣ ಮತ್ತು ವಿಜಯಪುರ ತೀವ್ರ ನಿಗಾ ಆರೈಕೆ ಘಟಕಕ್ಕೆ ಅಗತ್ಯವಿರುವ ಉಪಕರಣ ಖರೀದಿಸಲು ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.

ಈ ಹಿಂದೆ 16 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಅನುಮೋದನೆಗೊಂಡಿದ್ದ ಚಿಕ್ಕಬಳ್ಳಾಪುರದ 50 ಹಾಸಿಗೆಯ ತೀವ್ರ ನಿಗಾ ಆರೋಗ್ಯ ಘಟಕವನ್ನು ಚಿಂತಾಮಣಿ ತಾಲೂಕಿಗೆ ಸ್ಥಳಾಂತರಿಸಲು ಅನುಮೋದನೆ ಸಿಕ್ಕಿದ್ದು, ನಿರ್ಮಾಣ ವೆಚ್ಚ 16.63 ಕೋಟಿ ತಿದ್ದುಪಡಿಗೆ ಸಂಪುಟ ಸಭೆ ಅನುಮೋದನೆ ನೀಡಿದೆ.

15 ವಿವಿಧ ಹಣಕಾಸು ಆಯೋಗದ ಅನುದಾನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರೋಗ ಪತ್ತೆಗೆ ಮೂಲ ಸೌಕರ್ಯ ಒದಗಿಸಲು 145.99 ಕೋಟಿ ಅನುದಾನಲ್ಲಿ ಉಪಕರಣಗಳನ್ನು ಖರೀದಿಸಲು, 84.88 ಕೋಟಿ ಅಂದಾಜು ಮೊತ್ತದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕ್ಷೇಮ ಕೇಂದ್ರ – ನಮ್ಮ ಕ್ಲಿನಿಕ್’ಗಳಲ್ಲಿ ಪ್ರಯೋಗಾಲಯ ಮತ್ತು ಆರೋಗ್ಯ ಸೇವೆಗಳನ್ನು ಬಲಪಡಿಸಲು ಉಪಕರಣ ಖರೀದಿಸಲು ಹಾಗೂ 5 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಮತ್ತು 72.96 ಕೋಟಿ ಅಂದಾಜು ಮೊತ್ತದಲ್ಲಿ ನಮ್ಮ ಕ್ಲಿನಿಕ್‌ಗಳಿಗೆ ಅಗತ್ಯವಿರುವ ಔಷಧಿ ಮತ್ತು ರಾಸಾಯನಿಕಗಳನ್ನು PM – ABHIM ಅನುದಾನದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

Leave a Reply

Your email address will not be published. Required fields are marked *