ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್: ಅಣ್ಣಾರಾಯ ಇವಣಿ ಆಕ್ರೋಶ

ತಾಲೂಕು

ಚಿತ್ತಾಪುರ: ಪಂಚಮಸಾಲಿ ಸಮುದಾಯದ 2ಎ ಪ್ರವರ್ಗದ ಮೀಸಲಾತಿಗಾಗಿ
ನಡೆಸುತ್ತಿರುವ ಹೋರಾಟದ ಕುರಿತು ಮುಂಚೆಯೇ ಸರ್ಕಾರದ ಅರಿವಿಗೆ ಬಂದಿದ್ದರೂ ಯಾವುದೇ ಮುಂಜಾಗ್ರತಾ ಕ್ರಮ ವಹಿಸದ ಸರ್ಕಾರ ದುರುದ್ದೇಶಪೂರ್ವಕವಾಗಿ ಚಳುವಳಿ ಹತ್ತಿಕ್ಕುವ ದುರಾಲೋಚನೆಯಿಂದ ಚಳವಳಿ ನಿರತ ಅಮಾಯಕರ ಮೇಲೆ ಲಾಠಿಚಾರ್ಜ್ ಪ್ರಯೋಗಿಸಿದೆ ಎಂದು ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ತಾಲೂಕ ಅಧ್ಯಕ್ಷ ಅಣ್ಣಾರಾಯ ವಿ ಇವಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಒಂದು ವಾರದಿಂದಲೂ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೋರಾಟದ ಕುರಿತು ಮಾಹಿತಿ ಒದಗಿಸುತ್ತಲೇ ಬಂದಿದ್ದಾರೆ. ಈ ಹಂತದಲ್ಲಿ ಪೂಜ್ಯರೊಂದಿಗೆ ಸಕಾರಾತ್ಮಕ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಹುಡುಕುವ ಮಾರ್ಗೋಪಾಯ ಕಂಡುಹಿಡಿಯದೇ ಚಳವಳಿ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಕಾಂಗ್ರೆಸ್ ಸರ್ಕಾರ ತನ್ನ ಅಸಮರ್ಥ ನಡೆ ತೋರಿಸಿದೆ ಎಂದರು.

ಶಾಂತ ರೀತಿಯಿಂದ ಪ್ರತಿಭಟನೆ ಮಾಡುತ್ತಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಯಾವ ಕಾರಣಕ್ಕಾಗಿ ಲಾಠಿ ಚಾರ್ಜ್ ಮಾಡಿದ್ದಿರಿ ? ಅಮಾಯಕ ಜನರ ಮೇಲೆ ಮನಸೂ ಇಚ್ಚೆ ದಂಡಿಸಿರುವದು ಒಂದು ಅಮಾನವೀಯ ಕೃತ್ಯವಾಗಿದೆ, ಶೀಘ್ರವಾಗಿ ಹಲ್ಲೆ ಮಾಡಿದ ಪೋಲಿಸ ಅದಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದರು

ಅಮಾಯಕರ ಮೇಲೆ ಹಲ್ಲೆ ಆಗಿರುವ ಕುರಿತು ಕ್ಷಮೆಯಾಚಿಸಲಿ. ಮಾರಣಾಂತಿಕ ಪೆಟ್ಟು ತಿಂದವರಿಗೆ ಸೂಕ್ತ ಚಿಕಿತ್ಸೆ ಹಾಗೂ ಪರಿಹಾರವನ್ನು ಒದಗಿಸಲಿ ಎಂದು ಒತ್ತಾಯಿಸುತ್ತೆವೆ ಎಂದರು.

Leave a Reply

Your email address will not be published. Required fields are marked *