ಚಿತ್ತಾಪುರ: ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಚಂದ್ರಶೇಖರ ಕಾಶಿ ಅವರ ಪುತ್ರ ಆನಂದ ಕಾಶಿ ಪಿಎಸ್‌ಐ ಆಗಿ ರಾಜಭವನಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಗೌರವಾನ್ವಿತ ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಅವರು ಪ್ರಶಂಸಾ ಪತ್ರ ನೀಡಿ ಶುಭ ಹಾರೈಸಿದ್ದಾರೆ.
ಬೆಂಗಳೂರು ವಿಧಾನಸೌಧ ಪೊಲೀಸ್ ಠಾಣೆಯ ಪಿಎಸ್‌ಐ ಆನಂದ ಕಾಶಿ ಅವರಿಗೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಪ್ರಶಂಸಾ ಪತ್ರ ನೀಡಿ ಶುಭ ಹಾರೈಸಿದ್ದಾರೆ.
ರಾಜಭವನಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಮಾಡಿದ ಪ್ರಯತ್ನಗಳು ಮತ್ತು ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿಮ್ಮ ಎಲ್ಲಾ ಪ್ರಯತ್ನಗಳಿಗೆ ನಿಮಗೆ ಶುಭ ಹಾರೈಸುತ್ತೆನೆ, ಭವಿಷ್ಯದಲ್ಲಿ ನಿಮಗೆ ಇನ್ನಷ್ಟು ಪ್ರಶಸ್ತಿಗಳು ಲಭಿಸಲಿ, ನಿಮಗೆ ಅದೃಷ್ಟ ಮತ್ತು ಸಮೃದ್ಧಿ ದೊರೆಯಲಿ ಎಂದು ಹಾರೈಸಿದ್ದಾರೆ.