ಠಾಣೆಯಲ್ಲಿ ರಾಸಲೀಲೆ ಕೇಸ್‌: ಅಮಾನತು ಬೆನ್ನಲ್ಲೆ DySP ರಾಮಚಂದ್ರಪ್ಪಗೆ ಬಿಗ್‌ ಶಾಕ್‌

ರಾಜಕೀಯ

ತುಮಕೂರು: ಪೊಲೀಸ್‌ ಠಾಣೆಗೆ ದೂರು ನೀಡಲು ಬಂದಿರುವ ಮಹಿಳೆ ಜೊತೆ ಡಿವೈಎಸ್‌ಪಿ ರಾಸಲೀಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ. 2026ರಲ್ಲಿ ನಿವೃತ್ತಿ ಹೊಂದಬೇಕಾಗಿದ್ದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರಿಗೆ ಇದೆಲ್ಲಾ ಬೇಕಿತ್ತಾ ಎನ್ನುವಂತಾಗಿದೆ.

ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ರಾಮಚಂದ್ರಪ್ಪ ಹಾಗೂ ಮಹಿಳೆಯೊಬ್ಬರ ವಿಡಿಯೋ ಎಲ್ಲೆಡೆ ವೈರಲ್‌ ಆಗಿತ್ತು. ಪೊಲೀಸ್‌ ಠಾಣೆಯಲ್ಲೇ ಮಹಿಳೆಯನ್ನು ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದರು ಎನ್ನುವ ಆರೋಪದ ಮೇಲೆ ಡಿವೈಎಸ್‌ಪಿ ರಾಮಚಂದ್ರಪ್ಪರನ್ನು ಅಮಾನತು ಮಾಡಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದರು. ಈಗ ಅಮಾನತಿನ ಬೆನ್ನಲ್ಲೇ ರಾಮಚಂದ್ರಪ್ಪರನ್ನು ಬಂಧಿಸಿರುವ ವಿಚಾರ ಬಹಿರಂಗವಾಗಿದೆ.

ಪೊಲೀಸ್‌ ಠಾಣೆಗೆ ಮಹಿಳೆ ಬಂದಿದ್ದೆಕೆ ?
ತುಮಕೂರು ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣೆಗೆ ಮಹಿಳೆಯೊಬ್ಬರು ಪಾವಗಡದಿಂದ ಜಮೀನು ಕುರಿತು ವ್ಯಾಜ್ಯ ಬಗೆಹರಿಸುವಂತೆ ದೂರು ನೀಡಲು ಬಂದಿದ್ದರು. ಈ ವೇಳೆ ಡಿವೈಎಸ್‌ಪಿ ರಾಮಚಂದ್ರಪ್ಪ ಪರಿಚಯವಾದ ಬಳಿಕ ನ್ಯಾಯಕ್ಕಾಗಿ ಮಹಿಳೆ ಮನವಿ ಮಾಡಿಕೊಂಡಿದ್ದಾರೆ. ಮಹಿಳೆಯ ಅಸಹಾಯಕತೆಯನ್ನು ಬಳಸಿಕೊಂಡ ರಾಮಚಂದ್ರಪ್ಪ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದರು. ಜೊತೆಗೆ ತಮ್ಮ ಮಾತುಗಳಿಂದಲೇ ಪುಸಲಾಯಿಸಿ ಚೆನ್ನಾಗಿ ಸ್ನೇಹ ಬೆಳಸಿಕೊಂಡಿದ್ದರು ಎನ್ನಲಾಗಿದೆ.

ನಾವು ಕರೆದಾಗ ವಿಚಾರಣೆಗೆ ಪೊಲೀಸ್ ಠಾಣೆಗೆ ಬರಬೇಕು ಎಂದು ತಾಕೀತು ಮಾಡಿದ್ದ ಡಿವೈಎಸ್‌ಪಿ ರಾಮಚಂದ್ರಪ್ಪ ಕೆಲವು ಮಾಹಿತಿ ಬೇಕು ಎಂದು ಮಹಿಳೆಯನ್ನು ಠಾಣೆಗೆ ಕರೆಸಿಕೊಂಡಿದ್ದ. ಆ ಸಂದರ್ಭದಲ್ಲಿ ಮಹಿಳೆಯನ್ನು ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

ಪೊಲೀಸ್ ಠಾಣೆಗೆ ಬಂದ ಮಹಿಳೆಯನ್ನು ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಯಾರೋ ಅಪರಿಚಿತ ವ್ಯಕ್ತಿಯೊಬ್ಬ ಇದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ ಈ ವಿಡಿಯೋ ಶೇರ್‌ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿಯೂ ಎಲ್ಲೆಡೆ ವೈರಲ್‌ ಆಗಿತ್ತು. ವಿಡಿಯೋ ಮಾಡಿದವರು ಯಾರು ? ಎಲ್ಲೆಡೆ ಹಂಚಿದವರು ಯಾರು ? ಎನ್ನುವ ಮಾಹಿತಿ ಇದುವರೆಗೂ ಬಹಿರಂಗವಾಗಿಲ್ಲ.

ಡಿವೈಎಸ್‌ಪಿ ರಾಮಚಂದ್ರಪ್ಪ ರಾಸಲೀಲೆಯ ದೃಶ್ಯ ವೈರಲ್‌ ಆಗುತ್ತಿದ್ದಂತೆ ಅಮಾನತು ಮಾಡಲಾಗಿತ್ತು. ಬಳಿಕ ನ್ಯಾಯ ಕೇಳಲು ಬಂದ ಮಹಿಳೆಯನ್ನು ಪುಸಲಾಯಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ, ಸದ್ಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *