ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಯುವಕ, ಅರಣ್ಯ ಇಲಾಖೆ ಸಿಬ್ಬಂದಿ ಶಾಕ್

ಜಿಲ್ಲೆ

ತುಮಕೂರು: ಯುವಕನೋರ್ವ ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ನಡೆದಿದೆ.

ಚಿರತೆಯೊಂದು ಹಲವು ದಿನಗಳಿಂದ ರಂಗಾಪುರ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ಳುತ್ತಿರುವದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಇಂದು ಪುರಲೆಹಳ್ಳಿ ರಸ್ತೆಯಲ್ಲಿರುವ ಕುಮಾರ ಎಂಬವರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬಿಟ್ಟು ಚಿರತೆ ಸೆರೆಹಿಡಿಯುವ ಸಲುವಾಗಿ ಸಕಲ ಸಲಕರಣೆಗಳೊಂದಿಗೆ ಬಂದಿದ್ದರು. ಆದರೆ ಚಿರತೆ ಸೆರೆಹಿಡಿಯಲಾಗದೆ ಕೈಚೆಲ್ಲಿ ಕುಳಿತರು.

ಈ ವೇಳೆ ಗ್ರಾಮದ ಆನಂದ ಎಂಬವರು ಚಿರತೆ ಬಾಲ ಹಿಡಿದು ಬೋನಿಗೆ ಹಾಕಿದ್ದಾರೆ. 5 ವರ್ಷದ ಚಿರತೆಯನ್ನು ಯುವಕ ಸೆರೆಹಿಡಿದಿದ್ದನ್ನು ಕಂಡು ಅರಣ್ಯ ಇಲಾಖೆ ಸಿಬ್ಬಂದಿ ಶಾಕ್ ಆಗಿದ್ದಾರೆ. ಆನಂದ ಸಾಹಸಕ್ಕೆ ಇಡೀ ಸುತ್ತಮುತ್ತಲಿನ ಗ್ರಾಮಸ್ಥರೆಲ್ಲಾ ಖುಷಿಯಾಗಿದ್ದಾರೆ, ಅವರ ಧೈರ್ಯ, ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *