ಚಿತ್ತಾಪುರ: ವಾಡಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ ನೀಡಿ ವಿವಿಧ ಇಲಾಖೆಯ ಕಾಮಗಾರಿ ಪರಿಶೀಲನೆ ಮಾಡಿದರು.
ತಾಲೂಕಿನಲ್ಲಿ ವಾಡಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ, ಇಂದಿರಾ ಕ್ಯಾಂಟೀನ್ ಕಟ್ಟಡದ ಕಾಮಗಾರಿ ಮತ್ತು ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂಧರ್ಭದಲ್ಲಿ ಸೇಡಂ ಸಹಾಯಕ ಆಯುಕ್ತ ಪ್ರಭು ರೆಡ್ಡಿ, ತಹಸೀಲ್ದಾರ ನಾಗಯ್ಯ ಹಿರೇಮಠ ಮತ್ತು ಆಯಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
