ಕರ್ನಾಟಕದ ಇತಿಹಾಸದಲ್ಲಿಯೇ ಮೊದಲು ಬಾರಿಗೆ ಸಿಎಂ ಮುಂದೆ 6 ನಕ್ಸಲರು ಶರಣಾಗತಿ

ರಾಜ್ಯ

ರಾಯಚೂರು: ಕರ್ನಾಟಕದ ಇತಿಹಾಸದಲ್ಲೇ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಯಾಕೆಂದರೆ ಕಳೆದ ಹಲವು ವರ್ಷಗಳಿಂದ ಕಾಡಿನೊಳಗೆ ಅಡಗಿ ಕುಳಿತು ಸದಾ ಸಂಘರ್ಷ, ರಕ್ತಚರಿತ್ರೆ ಬರೆಯುತ್ತಿದ್ದ ನಕ್ಸಲರು ಈಗ ಮುಖ್ಯವಾಹಿನಿಗೆ ಬಂದಿದ್ದಾರೆ. 6 ನಕ್ಸಲರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್ ಸಮ್ಮುಳದಲ್ಲೇ ಶರಣಾಗಿದ್ದಾರೆ. ಇನ್ನು ಶರಣಾದ ನಕ್ಸಲರಿಗೆ ಸಿಎಂ ಸಂವಿಧಾನದ ಪುಸ್ತಕ ನೀಡಿದರು. ಈ ಮೂಲಕ ಕರ್ನಾಟಕ ನಕ್ಸಲ ಮುಕ್ತ ರಾಜ್ಯ ಎಂದು ವ್ಯಾಖ್ಯಾನಿಸಬಹುದು.

6 ನಕ್ಸಲರಾದ ಶೃಂಗೇರಿ ತಾಲೂಕಿನ ಮುಂಡುಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲಕದ ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಳಿ, ವಸಂತ, ಎನ್ ಜೀಶಾ ಹಲವು ವರ್ಷಗಳ ಸಶಸ್ತ್ರ ಹೋರಾಟಕ್ಕೆ ಗುಡ್​ಬೈ ಹೇಳಿ ಮುಖ್ಯವಾಹಿನಿಗೆ ಬಂದಿದ್ದಾರೆ. ಈ ವೇಳೆ ಡಿಜಿ ಐಜಿಪಿ ಅಲೋಕ್‌ ಮೋಹನ್‌, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಶರಣಾಗತಿಯಾದ 6 ನಕ್ಸಲರ ಕುಟುಂಬದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *