ಕಲಬುರಗಿ: ಕ್ರೀಡಾ ಕ್ಷೇತ್ರದಲ್ಲಿ ಎಲೆಮರೆ ಕಾಯಿಯಂತೆ ಅನೇಕ ಪ್ರತಿಭಾವಂತರಿದ್ದಾರೆ. ಅವರನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ, ಸಾಧನೆಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಧರ್ಮಾರಾಜ ಜವಳಿ ಹೇಳಿದರು.
ನಗರದ ಗಂಗಾ ನಗರದ ವಿವೇಕಾನಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಹಾರಿಬಿಡುವ ಮೂಲಕ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.
ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ, ಕ್ರೀಡಾ ಚಟುವಟಿಕೆಗಲ್ಲಿಯೂ ಭಾಗವಹಿಸಬೇಕು. ಕ್ರೀಡೆಗಳಲ್ಲಿ ತೊಡಗುವುದರಿಂದ ದೈಹಿಕ ಮತ್ತು ಮಾನಸಿಕ ವ್ಯಾಯಾಮ ದೊರೆತು ಬೆಳವಣಿಗೆಯಾಗುತ್ತದೆ. ಪ್ರಸ್ತುತವಾಗಿ ದೇಶೀಯ ಕ್ರೀಡೆಗಳು ಉಳಿಸಿ, ಬೆಳೆಸಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಬಸವರಾಜ ಮಳ್ಳಿ, ಉಪಾಧ್ಯಕ್ಷ ಶ್ರೀಕುಮಾರ ದತ್ತ, ಕಾರ್ಯದರ್ಶಿ ಗೊಲ್ಲಾಳಪ್ಪ ಜಮಾದಾರ, ಶಾಲೆಯ ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ ಗುಡಬಾ ಹಾಗೂ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರು, ಕ್ರೀಡಾಪಟುಗಳು ಭಾಗವಹಿಸಿದ್ದರು.