ಚಿತ್ತಾಪುರ: ಶಿಕ್ಷಣ ವ್ಯವಸ್ಥೆಯಲ್ಲಿ ಬಹುತೇಕ ಶಿಕ್ಷಣ ಸಂಸ್ಥೆಗಳು ಕೇವಲ ಓದು, ಬರಹಕ್ಕೆ ಮಾತ್ರ ಪ್ರಾಮುಖ್ಯತೆ ನೀಡಿ ಮಕ್ಕಳನ್ನು ಏಕಮುಖದ ಬೆಳವಣಿಗೆಗೆ ಕಾರಣವಾಗುತ್ತಿವೆ. ಆದರೆ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾ ಸಂಸ್ಥೆಯ ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ ವಿಕಾಸ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂoಡಗಿ ಹೇಳಿದರು.
ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ನೇತಾಜಿ ಸುಭಾಷ್ ಚಂದ್ರಬೋಸರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಇಂದಿನ ಪೀಳಿಗೆ ದೈಹಿಕವಾಗಿ ಸದೃಢರಾಗಲು ಆಟಗಳು ಬೇಕು. ಆದರೆ ನಮ್ಮ ಈಗಿನ ಆಹಾರ ಪದ್ಧತಿ ನಮ್ಮ ಮಕ್ಕಳನ್ನು ಆಶಕ್ತರನ್ನಾಗಿ ಮಾಡುತ್ತಿವೆ. ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಫಾಸ್ಟ್ ಫುಡ್ ನಮ್ಮ ಆಹಾರ ಪದ್ಧತಿಯಾಗಿದೆ ಇದರಿಂದ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿಯೇ ಅನೇಕ ಖಾಯಿಲೆಗಳು ಬರುತ್ತಿವೆ. ಮೊಬೈಲ್ ಚಟಕ್ಕೆ ಅಂಟಿಕೊಂಡು ಆಟವಾಡುವುದು ಕಡಿಮೆಯಾಗಿದೆ. ಬಹುತೇಕ ಶಾಲೆಗಳಲ್ಲಿ ಆಟದ ಮೈದಾನ ಮತ್ತು ದೈಹಿಕ ಶಿಕ್ಷಕರ ಕೊರತೆಯಿಂದ ಮಕ್ಕಳು ಆಟಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಸಂಸ್ಥೆಯ ಅಧ್ಯಕ್ಷ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ವೇದಿಕೆ ಮೇಲೆ ಸಂಸ್ಥೆಯ ಉಪಾಧ್ಯಕ್ಷ ಚೆನ್ನಣ್ಣ ಬಾಳಿ, ಸಹಕಾರ್ಯದರ್ಶಿ ಈಶ್ವರಪ್ಪ ಬಾಳಿ, ಸದಸ್ಯ ಸಿದ್ದಲಿಂಗೇಶ ಜ್ಯೋತಿ ಇದ್ದರು.
ವಿವಿಧ ಗುಂಪು ಮತ್ತು ಮೇಲಾಟಗಳಲ್ಲಿ 1000 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು.
ದೈಹಿಕ ಶಿಕ್ಷಕ ಶಿವಕುಮಾರ ಸರಡಗಿ ಹಾಗೂ ರೋಹಿತ್ ಪಥಸಂಚಲನ ನಡೆಸಿಕೊಟ್ಟರು, ಶರಣು ಸಜ್ಜನ ನೇತೃತ್ವದಲ್ಲಿ ಕ್ರೀಡಾ ಜ್ಯೋತಿ ತರಲಾಯಿತು

ಸೃಷ್ಟಿ ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು,
ಪ್ರಾಚಾರ್ಯ ಕೆ.ಐ ಬಡಿಗೇರ್ ಸ್ವಾಗತಿಸಿದರು, ಈರಣ್ಣ ಹಳ್ಳಿ ಪ್ರಾರ್ಥಿಸುಸಿದರು, ಸಿದ್ದಲಿಂಗ ಬಾಳಿ ನಿರೂಪಿಸಿ ವಂದಿಸಿದರು.