ಅಂಗನವಾಡಿಗಳಲ್ಲಿ‌ ಶುಚಿತ್ವ ಕಾಪಾಡಿ: ಸಚಿವ ಪ್ರಿಯಾಂಕ್ ಖರ್ಗೆ

ತಾಲೂಕು

ಚಿತ್ತಾಪುರ: ಅಂಗನವಾಡಿ ಕೇಂದ್ರಗಳಲ್ಲಿ ತಯಾರಿಸುವ ಅಡುಗೆಯಲ್ಲಿ ಶುಚಿತ್ವ ಹಾಗೂ ಸ್ವಚ್ಛತೆ ಕಾಪಾಡಿಕೊಂಡು ಮಕ್ಕಳಿಗೆ ವಿದ್ಯೆ ಕಲಿಸುವುದರ ಜೊತೆಗೆ ಆರೋಗ್ಯದ ಕಡೆಗೆ ವಿಶೇಷ ಗಮನಹರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ
ಪ್ರಿಯಾಂಕ್ ಖರ್ಗೆ ಸೂಚಿಸಿದರು.

2022-23ನೇ ಸಾಲಿನ ಕೆಕೆಆರ್ ಡಿಬಿ ಮೆಗಾ ಮ್ಯಾಕ್ರೋ ಯೋಜನೆಯಡಿಯಲ್ಲಿ ತಲಾ 20 ಲಕ್ಷ ರೂ ವೆಚ್ಚದಲ್ಲಿ ದಂಡೋತಿ ಗ್ರಾಮದಲ್ಲಿ ಮೂರು ಹಾಗೂ ಚಿತ್ತಾಪುರ ಪಟ್ಟಣದಲ್ಲಿ ಎರಡು ಅಂಗನವಾಡಿ ಕೇಂದ್ರಗಳ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಎಸ್ಪಿ ಅಡೂರು ಶ್ರೀನಿವಾಸಲು, ಅಡಿಷನಲ್
ಎಸ್ಪಿ ಮಹೇಶ್ ಮೇಘಣ್ಣವರ್, ಡಿವೈಎಸ್ಪಿ
ಶಂಕರಗೌಡ ಪಾಟೀಲ, ತಹಸೀಲ್ದಾರ್ ನಾಗಯ್ಯ
ಹಿರೇಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಇಲಾಖೆಯ ಉಪನಿರ್ದೇಶಕ ರಾಜಕುಮಾರ
ರಾಠೋಡ, ಸಿಡಿಪಿಒ ಆರತಿ ತುಪ್ಪದ, ದಂಡೋತಿ
ಗ್ರಾ.ಪಂ ಅಧ್ಯಕ್ಷೆ ಸರಸ್ವತಿ ಶಿವಾಜಿ, ಬ್ಲಾಕ್ ಕಾಂಗ್ರೆಸ್
ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಸದಸ್ಯ ನಾಗರೆಡ್ಡಿ
ಪಾಟೀಲ ಕರದಾಳ, ಕಾರ್ಯದರ್ಶಿ ರಮೇಶ
ಮರಗೋಳ, ಪ್ರಮುಖರಾದ ರಾಜಶೇಖರ
ತಿಮ್ಮನಾಯಕ, ವೀರಣ್ಣಗೌಡ ಪರಸರೆಡ್ಡಿ ನಾಲವಾರ,
ಸುನೀಲ್ ದೊಡ್ಡಮನಿ, ಬಸವರಾಜ ಹೊಸಳ್ಳಿ,
ಮನ್ಸೂರ್ ಪಟೇಲ್, ಚಂದ್ರಶೇಖರ್ ಕಾಶಿ,
ಮಲ್ಲಿಕಾರ್ಜುನ ಕಾಳಗಿ, ಶೀಲಾ ಕಾಶಿ, ವಿನೋದ
ಗುತ್ತೇದಾರ, ಶಿವಕಾಂತ ಬೆಣ್ಣೂರಕರ್, ರಷೀದ್
ಪಠಾಣ, ಶರಣಪ್ಪ ನಾಟೀಕಾರ, ಮುನಿಯಪ್ಪ ಕೊಳ್ಳಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *