ದಟ್ಟ ಮಂಜಿನಿಂದ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ 50 ವಾಹನಗಳ ನಡುವೆ ಅಪಘಾತ

ರಾಷ್ಟೀಯ

ಲಕ್ನೋ: ದೆಹಲಿ – ಮೀರತ್ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದ ಪರಿಣಾಮ 50 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ, ಆರಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಅಪಘಾತದಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ, ವಿಡಿಯೋ ವೈರಲ್‌ ಆಗಿದೆ.

ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೆ ಸಾವುನೋವುಗಳು ಸಂಭವಿಸಿಲ್ಲ.

ದಟ್ಟವಾದ ಮಂಜಿನಿಂದಾಗಿ ಈ ಅಪಘಾತ ಸಂಭವಿಸಿದೆ. ಇದರಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ. ಅಪಘಾತಕ್ಕೊಳಗಾದ ವಾಹನಗಳನ್ನು ತೆರವುಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *