ನಾಲ್ಕು ಸಾವಿರಕ್ಕೂ ಹೆಚ್ಚು ಶಾಲೆಗಳು ಮುಚ್ಚಲು ರಾಜ್ಯ ಸರ್ಕಾರ ಯತ್ನ: ಎಐಡಿಎಸ್ಓ ಪ್ರತಿಭಟನೆ

ಪಟ್ಟಣ

ಸುದ್ದಿ ಸಂಗ್ರಹ ಶಹಾಬಾದ
ಅತಿ ಕಡಿಮೆ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಮಕ್ಕಳ ಹಿತಾಸಕ್ತಿಯನ್ನು ಕಾಯ್ದುಕೊಂಡು ಸದರಿ ಶಾಲೆಗಳನ್ನು ಸಂಯೋಜಿತ ಸೂಚಿಸುತ್ತಿದೆ. ಈ ಸಂಯೋಜಿತ ಶಾಲೆಗಳನ್ನು ಹಬ್ ಹ್ಯಾಂಡ್ ಸ್ಟೋಕ್ ಮಾಡಲು ಎಂಬ ನಾಮಕರಣ ಹೆಸರಿನಲ್ಲಿ ರಾಜ್ಯದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ಈ ನಡೆಯನ್ನು ಖಂಡಿಸಿ ಎಐಡಿಎಸ್ಓ ಸಂಘಟನೆಯ ಜಿಲ್ಲಾ ಖಜಾಂಚಿ ವೆಂಕಟೇಶ್ ಹೇಳಿದರು.

ನಗರದ ನೆಹರೂ ಚೌಕ್ ನಲ್ಲಿ ಎಐಡಿಎಸ್ಓ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರವು ಇದೆ ನೆಪವೊಡ್ಡಿ ಶಿಕ್ಷಣವನ್ನು ಸಂಪೂರ್ಣವಾಗಿ ಖಾಸಗಿಕರಣ ಮಾಡಲು ಎನ್’ಈಪಿ -2020 ನೀತಿಯನ್ನು ತಂದಿತ್ತು. ಈ ನೀತಿಯ ಪರಿಣಾಮವಾಗಿ ರಾಜ್ಯದಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿತ್ತು, ಇದನ್ನು ವಿರೋಧಿಸಿ ಎಐಡಿಎಸ್ಓ ನೇತೃತ್ವದಲ್ಲಿ ದೊಡ್ಡ ಮಟ್ಟದಲ್ಲಿ ಜಿಲ್ಲೆಯಾದ್ಯಂತ 7 ಲಕ್ಷಕ್ಕೂ ಹೆಚ್ಚು ಹಾಗೂ ರಾಜ್ಯದಾದ್ಯಂತ 36 ಲಕ್ಷ ಸಹಿಗಳನ್ನು ಸಂಗ್ರಹಿಸಿ ನಡೆದ ಹೋರಾಟದಿಂದಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚವ ನಿರ್ಧಾರ ಕೈಬಿಟ್ಟಿತ್ತು. ಆದರೆ ಇಂದಿನ ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಜಾರಿ ಮಾಡಿ, ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರ ಇದಾಗಿದೆ, ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು ತನ್ನ ಅವೈಜ್ಞಾನಿಕ ಮತ್ತು ಪ್ರಜಾತಾಂತ್ರಿಕ ಜನ ವಿರೋಧಿ ನಿರ್ಧಾರವಾಗಿದೆ. ಈ ಕೂಡಲೇ ಈ ನಿರ್ಧಾರ ಕೈಬಿಡಬೇಕು ಹಾಗೂ ಕೂಡಲೇ ಹಾಜರಾತಿ ಕಡಿಮೆಯಿರುವ ಶಾಲೆಗಳಿಗೆ ಅವಶ್ಯಕ ಸೌಲಭ್ಯಗಳನ್ನು ನೀಡಿ ರಕ್ಷಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಓ ಜಿಲ್ಲಾ ಸಮಿತಿ ಸದಸ್ಯ ಸ್ಫೂರ್ತಿ ಗುರುಜಾಲಕರ್ ಮಾತನಾಡಿದರು.

ಜಿಲ್ಲಾ ಸಮಿತಿ ಸದಸ್ಯರಾದ ದೇವರಾಜ್ ಹೋನಗುಂಟ, ಅಜಯ್ ಗುರಜಾಲಕರ್, ಬಾಬು ಪವಾರ್, ರಂಗನಾಥ್ ಮಾನೆ, ಬೃಂದಾ, ಸೃಷ್ಟಿ, ಚೈತನ ವಿದ್ಯಾರ್ಥಿಗಳಾದ ನಿಂಗರಾಜ್, ಚೈತ್ರ, ಯಲ್ಲಾಲಿಂಗ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



Leave a Reply

Your email address will not be published. Required fields are marked *