ಸುದ್ದಿ ಸಂಗ್ರಹ ಶಹಾಬಾದ
ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಅಳವಡಿಸಿಕೊಳ್ಳಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು.
ನಗರದ ಶ್ರೀಶರಣಬಸವೇಶ್ವರ ಜ್ಞಾನ ವಿಕಾಸ ಪೀಠ ಸಂಸ್ಥೆಯ ವಿವಿಧ ಪ್ರಕಲ್ಪಗಳ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಾಮಾನ್ಯರಲ್ಲಿ ಅಸಾಮಾನ್ಯರಾಗಿ ಗುರುತಿಸಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಅಂದಾಗ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಬಹುದು, ವಿದ್ಯಾರ್ಥಿಗಳು ತಮಗೆ ಸಿಗುವ ಸಮಯದ ಮಹತ್ವ ಅರಿತು ಪ್ರತಿ ದಿನ, ಪ್ರತಿಕ್ಷಣವನ್ನು ಸದ್ವಿನಿಯೋಗ ಮಾಡಿಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು, ವಿದ್ಯಾರ್ಥಿಗಳು ತಮ್ಮ ಗುರಿಯೊಂದಿಗೆ ಉತ್ತಮ ಯೋಜನೆ ಹಾಕಿಕೊಳ್ಳಬೇಕು ಎಂದರು.
ಸಂಸ್ಥೆಯ ಉಪಾಧ್ಯಕ್ಷ ವಿಜಯಕುಮಾರ ಮುತ್ತಟ್ಟಿ ಮಾತನಾಡಿ, ಪ್ರತಿಯೊಬ್ಬರಿಗೂ ಜೀವನದಲ್ಲಿ ಯಶಸ್ವಿಯಗಬೇಕೆಂಬ ಬಯಕೆ ಇರುತ್ತದೆ, ಉತ್ತಮ ಆರೋಗ್ಯದೊಂದಿಗೆ ಜೀವನದಲ್ಲಿ ನಿರಂತರ ಅಧ್ಯಯನ ಮಾಡುವ ಮೂಲಕ ಸಾಧನೆಯ ಶಿಖರ ಏರಬೇಕು ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹಾಗೂ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರಾಯಿತು.
ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ಯಾಷನ್ ಷೂ ಸ್ಫರ್ಧೆ ನಡೆಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ, ಹಾಡು, ಹಾಗೂ ಮನೋರಂಜನೆ ಕಾರ್ಯಕ್ರಮ ಜರುಗಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಣಮಂತರಾವ ಇಂಗಿನಶೆಟ್ಟಿ ವಹಿಸಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಭೀಮಾಶಂಕರ ಮುಟ್ಟತ್ತಿ, ಸದಸ್ಯರಾದ ಶಿವಕುಮಾರ ಇಂಗಿನಶೆಟ್ಟಿ, ಪದವಿ, ಪದವಿ ಪೂರ್ವ, ಪ್ರಾಥಮಿಕ, ಪ್ರೌಢ ಶಾಲೆಯ ಮುಖ್ಯಗುರು, ಶಾಲಾ ಆಡಳಿತ ಸದಸ್ಯರು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಮತ್ತು ಸಾವಿರಾರು ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತಿರಿದ್ದರು.
ಸಂಸ್ಥೆಯ ಉಪಾಧ್ಯಕ್ಷ ವಿಜಯಕುಮಾರ ಮುತ್ತಟ್ಟಿ ವರದಿ ವಾಚಿಸಿದರು.
ಪ್ರಾಚಾರ್ಯ ಚಂದ್ರಶೇಖರ ನಿರೂಪಿಸಿದರು, ಗೌರಿ ಸಂಗಡಿಗರು ಪ್ರಾರ್ಥಿಸಿದರು. ಧಾನಯ್ಯ ಮಠ ವಂದಿಸಿದರು.