ಬೆಂಗಳೂರು: ಕೋವಿಡ್ ನಂತರದ ಕಾಲಘಟ್ಟದಲ್ಲಿ ಎಲ್ಲೆಡೆ ಹಠಾತ್ ಸಾವುಗಳ ಬಗ್ಗೆ ಅಧ್ಯಯನ ನಡೆಸಲು ತಜ್ಞರು ಮತ್ತು ವಿಜ್ಞಾನಿಗಳ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಹೃದಯಾಘಾತ, ಹೃದಯಸ್ಥಂಭನ ಸೇರಿದಂತೆ ವಿವಿಧ ಕಾರಣಗಳಿಂದ ವಯಸ್ಸಿನ ಬೇಧವಿಲ್ಲದೆ ಜನ ಹಠಾತ್ ಸಾವನ್ನಪ್ಪುತ್ತಿದ್ದಾರೆ. ಕೋವಿಡ್ ಮತ್ತು ಕೋವಿಡ್ ಲಸಿಕೆಯ ಅಡ್ಡಪರಿಣಾಮಗಳಿಂದ ಈ ಸಾವುಗಳು ಸಂಭವಿಸುತ್ತಿರಬಹುದು ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿತ್ತು.
ಈ ಬಗ್ಗೆ ಅಧ್ಯಯನ ನಡೆಸಬೇಕು ಎಂಬ ಕೂಗು ಎದ್ದಿತ್ತು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಸ್ಪಂದಿಸಿದ್ದಾರೆ. ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಲು ಈ ಸಮಿತಿ ನೀಡುವ ವರದಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ತಮ್ಮ ಟಿಪ್ಪಣಿಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.