ಕೆಪಿಎಸ್‌ಸಿ ಪರೀಕ್ಷೆಗೆ ಕಪ್ಪು ಬಾಲ್ ಪೆನ್ ಬಳಕೆ ನಿಷೇಧ, ನೀಲಿ ಬಾಲ್ ಪಾಯಿಂಟ್ ಪೆನ್‌ ಬಳಕೆಗೆ ಸೂಚನೆ

ರಾಜ್ಯ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇನ್ನುಮುಂದೆ
ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಮಾಡಬೇಕು ಎಂದು ಕೆಪಿಎಸ್‌ಸಿ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ಈವರೆಗಿನ ಪರೀಕ್ಷೆಗಳಲ್ಲಿ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್‌ನಿಂದ ಪರೀಕ್ಷೆ ಬರೆಯಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗುತ್ತಿತ್ತು. ಸೂಚನೆಯಲ್ಲಿ ಮಾರ್ಪಾಡು ಮಾಡಿ ಫೆ.16 ರಿಂದ ಕೆಪಿಎಸ್’ಸಿ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಪೆನ್ ಮಾತ್ರ ಬಳಸಬೇಕು ಎಂದು ಕೆಪಿಎಸ್’ಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಮಾನ್ಯವಾಗಿ ಬಹುತೇಕ ಎಲ್ಲೆಡೆ ನೀಲಿ ಪೆನ್ ಬಳಕೆಯಲ್ಲಿದೆ. ಆದರೆ ಕೆಪಿಎಸ್‌ಸಿ ಪರೀಕ್ಷೆಗೆ ಮಾತ್ರ ಕಪ್ಪು ಬಣ್ಣದ ಪೆನ್ ಬಳಕೆಗೆ ನಿರ್ದೇಶನ ನೀಡುವುದರಿಂದ ಅಭ್ಯರ್ಥಿಗಳು ಅನಗತ್ಯವಾಗಿ ಗೊಂದಲಕ್ಕೆ ಒಳಗಾಗುತ್ತಾರೆ.

ಅಲ್ಲದೆ ಸೂಚನೆಯ ಹೊರತಾಗಿಯುವ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ನೀಲಿ ಸೇರಿದಂತೆ ಕಪ್ಪು ಹೊರತಾದ ಪೆನ್ನು ಬಳಸುತ್ತಾದ್ದಾರೆ. ಹೀಗಾಗಿ ಆಯೋಗದ ಸದಸ್ಯರು ಸಾಮಾನ್ಯವಾಗಿ ಬಳಕೆಯಲ್ಲಿರುವ ನೀಲಿ ಪೆನ್ನು ಬಳಕೆಗೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *