ಕಲಬುರಗಿ: ಜೇವರ್ಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೀಜಿನ 67ನೇ ವಾರ್ಷಿಕೋತ್ಸವ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ದಿ.12 ರಂದು ಬುಧವಾರ ಬೆ.10.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಉಪನ್ಯಾಸಕ, ಸಾಂಸ್ಕೃತಿಕ ಕಾರ್ಯದರ್ಶಿ ಹಾಗೂ ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ ಪಾಟೀಲ ಹೇಳಿದ್ದಾರೆ.
ಗುವಿವಿ ಸಿಂಡಿಕೇಟ್ ಸದಸ್ಯ, ಹಿರಿಯ ಸಾಹಿತಿ ಹಾಗೂ ಪ್ರಗತಿಪರ ಚಿಂತಕ ಎಸ್.ಪಿ.ಸುಳ್ಳದ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಿಕ್ಷಕ ಹಾಗೂ ಚಿಂತಕ ಸಂತೋಷ ಹೂಗಾರ ವಾರ್ಷಿಕೋತ್ಸವ ಭಾಷಣ ಮಾಡಲಿದ್ದಾರೆ.
ಸಿಬಿಸಿ ಉಪಾಧ್ಯಕ್ಷ ರವೀಂದ್ರಕುಮಾರ ವೈ.ಕೋಳಕೂರ್ ಗೌರವ ಅತಿಥಿ, ನಿವೃತ್ತ ಮುಖ್ಯ ಶಿಕ್ಷಕ ಹಾಗೂ ಸಮಾಜ ಸೇವಕ ಬಸವರಾಜ ಹಡಪದ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ರವೀಂದ್ರಕುಮಾರ ಸಿ ಬಟಗೇರಿ ವಹಿಸಲಿದ್ದಾರೆ. ಕಾಲೇಜಿನ ಸಾಂಸ್ಕೃತಿಕ ಕಾರ್ಯದರ್ಶಿ ಹಾಗೂ ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ ಪಾಟೀಲ ಗೌರವ ಉಪಸ್ಥಿತರಿರುತ್ತಾರೆ.
ಕಳೆದ ವರ್ಷ ಅತಿ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಗುವದು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದರು.