ರಾವೂರ: ಸಿದ್ದಲಿಂಗೇಶ್ವರ ಸಂಸ್ಥಾನ ಮಠದ 12ನೇ ಪೀಠಾಧಿಪತಿ ತ್ರಿವಿಧ ದಾಸೋಹಿ ಲಿಂಗೈಕ್ಯ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಐದನೇ ಪುಣ್ಯಸ್ಮರಣೋತ್ಸವ ಅಂಗವಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಶ್ರೀಮಠದ ಕಾರ್ಯದರ್ಶಿ ಡಾ. ಗುಂಡಣ್ಣ ಬಾಳಿ ತಿಳಿಸಿದ್ದಾರೆ.
ನೂತನ ಪೀಠಾಧಿಪತಿ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿದ್ಯದಲ್ಲಿ ದಿ.12 ರಂದು ಬುಧವಾರ ಬೆಳಿಗ್ಗೆ ಲಿಂಗೈಕ್ಯ ಪೂಜ್ಯರ ಗದ್ದುಗೆಗೆ ವಿಶೇಷ ಪೂಜೆ ನಡೆಯುವುದು. ನಂತರ ಏನ್.ಜಿ.ಏನ್ ಫೌಂಡೇಶನ್ ಸಹಯೋಗದಲ್ಲಿ ಖ್ಯಾತ ವೈದ್ಯರಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಎಲುವು, ಕೀಲು, ಹಲ್ಲು, ಬಿಪಿ, ಶುಗರ್, ಹೃದಯ ಸಂಬಂದಿ ಖಾಯಿಲೆಗಳಿಗೆ ಸೂಕ್ತ ತಪಾಸಣೆ ಮಾಡಿ ಚಿಕಿತ್ಸೆ ನೀಡುವರು.
ಉಚಿತ ಬೊನ್ ಸ್ಕ್ಯಾನ್ ಮಾಡಲಾಗುವದು, ಉಚಿತ ಔಷದಿ ನೀಡಲಾಗುವುದು. ಅದೇ ರೀತಿ ಜಿಮ್ಸ್ ಆಸ್ಪತ್ರೆಯ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ಬಂದಿರುವ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗುವದು. ರಾತ್ರಿ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದರು.
ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳಲು ಡಾ. ಬಾಳಿ ವಿನಂತಿಸಿದ್ದಾರೆ.