ಪೋಷಕಾಂಶಗಳ ಆಗರವಾದ ದ್ವಿದಳ ಧಾನ್ಯಗಳನ್ನು ಸೇವಿಸಿ: ಡಾ.ಪ್ರಮೋದ ಗುಂಡಗುರ್ತಿ

ಜಿಲ್ಲೆ

ಕಲಬುರಗಿ: ತೊಗರಿ ಬೇಳೆ, ಕಡಲೆಕಾಳು ಸೇರಿದಂತೆ ಸುಮಾರು 22 ತರಹದ ದ್ವಿದಳ ಧಾನ್ಯಗಳಿವೆ. ವಿಶೇಷವಾಗಿ ಬಾಣಂತಿಯರು ಮತ್ತು ಮಕ್ಕಳಲ್ಲಿ ಕಂಡುಬರುತ್ತಿರುವ ಅಪೌಷ್ಠಿಕತೆ ಹೋಗಲಾಡಿಸಲು ದ್ವಿದಳ ಧಾನ್ಯ ಉತ್ತಮ ಆರೋಗ್ಯಕ್ಕಾಗಿ ಮತ್ತು ರೋಗ ನಿರೋಧಕ ಶಕ್ತಿಗಾಗಿ ಬೇಕಾದ ಪ್ರೋಟಿನ್, ಫೈಬರ್ ಪ್ರಮಾಣ ಹೆಚ್ಚಾಗಿರುವದರಿಂದ ಅವುಗಳನ್ನು ಸೇವಿಸುವ ಮೂಲಕ ಅಪೌಷ್ಠಿಕತೆ ನಿರ್ಮೂಲನೆ ಮಾಡಲು ಪ್ರಯತ್ನಿಸಬೇಕಾಗಿದೆ ಎಂದು ಆಯುರ್ವೇದ ಮತ್ತು ಪ್ರಕೃತಿ ಚಿಕಿತ್ಸೆ ತಜ್ಞ ಡಾ.ಪ್ರಮೋದ ಗುಂಡಗುರ್ತಿ ಸಲಹೆ ನೀಡಿದರು.

ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ದ್ವಿದಳ ಧಾನ್ಯ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ದ್ವಿದಳ ಧಾನ್ಯಗಳಲ್ಲಿ ಖನಿಜಾಂಶ, ಜೀವಸತ್ವವಗಳಿವೆ. ಕಡಿಮೆ ಕ್ಯಾಲರಿ, ಹೆಚ್ಚು ಪೋಷಕಾಂಶಗಳನ್ನು ಹೊಂದಿವೆ. ದೇಹದ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರುಸುವುದು, ರಕ್ತದಲ್ಲಿನ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಗೊಳಿಸುವುದು, ಮಲಬದ್ದತೆ ನಿವಾರಿಸುವುದು, ಜೀರ್ಣಾಂಗ ವ್ಯವಸ್ಥೆಯನ್ನು ಸಮತೋಲನದಲ್ಲಿಡುವುದು ಸೇರಿದಂತೆ ಅನೇಕ ಮಹತ್ವಪೂರ್ಣ ಕಾರ್ಯಗಳನ್ನು ದ್ವಿದಳ ಧಾನ್ಯಗಳು ಮಾಡುತ್ತವೆ. ಎಣ್ಣೆ ಪದಾರ್ಥಗಳು, ಫಾಸ್ಟ್ ಫುಡ್ ಸೇವಿಸಿ ಆರೋಗ್ಯ ಕೆಡಿಸಿಕೊಳ್ಳುವ ಬದಲು, ಹೆಚ್ಚಿನ ಪೋಷಕಾಂಶ ಹೊಂದಿರುವ ದ್ವಿದಳ ಧಾನ್ಯಗಳನ್ನು ನಿಯಮಿತವಾಗಿ, ಸೂಕ್ತ ಪ್ರಮಾಣದಲ್ಲಿ ಸೇವಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ, ಸಂಸ್ಥೆಯ ಮುಖ್ಯಸ್ಥ ಶಿವಕುಮಾರ ಮುತ್ತಾ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *