ಜಿ.ಪಂ, ತಾ.ಪಂ ಚುನಾವಣೆ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

ರಾಜ್ಯ

ಬೆಂಗಳೂರು: ರಾಜ್ಯದಲ್ಲಿ ಮೂರುವರೆ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಜಿ.ಪಂ, ತಾ.ಪಂ ಚುನಾವಣೆ ನಡೆಸುವ ಸಂಬಂಧ ಸೋಮವಾರ ಹೈಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಹೀಗಾಗಿ ರಾಜ್ಯ ಸರಕಾರವು ಸದ್ಯದಲ್ಲೇ ಚುನಾವಣ ಆಯೋಗಕ್ಕೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಸಲ್ಲಿಕೆ ಮಾಡಬಹುದೇ ಎಂಬ ಕುತೂಹಲ ಮೂಡಿದೆ.

ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಸರಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸುವ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲಿಸುವಲ್ಲಿ ಸರಕಾರ ವಿಫ‌ಲವಾಗಿದೆ, ಆದಷ್ಟು ಬೇಗನೆ ಮೀಸಲಾತಿ ಪಟ್ಟಿ ಕೊಟ್ಟು ಚುನಾವಣೆ ನಡೆಸಲು ಅವಕಾಶ ಮಾಡಿಕೊಡಲು ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯು ಸೋಮವಾರ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.

ಚುನಾವಣೆಗೆ ಎಲ್ಲರೂ ಸಜ್ಜಾಗಿ
ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸದ್ಯದಲ್ಲೆ ಸೂಚನೆ ಬರುವ ಸಾಧ್ಯತೆ ಇದೆ. ಯಾವುದೆ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗಬಹುದು. ಇದಕ್ಕೆ ನಾವೆಲ್ಲರೂ ಸಿದ್ಧತೆ ಮಾಡಿಕೊಳ್ಳಬೇಕು.
– ಡಿ.ಕೆ ಶಿವಕುಮಾರ, ಉಪಮುಖ್ಯಮಂತ್ರಿ

Leave a Reply

Your email address will not be published. Required fields are marked *