ಕಲಬುರಗಿ: ಇಂದಿನ ಮಕ್ಕಳೆ ನಾಳಿನ ನಾಗರಿಕರಾಗಿರುವದರಿಂದ ಬಾಲ್ಯದಲ್ಲಿಯೆ ಅವರಿಗೆ ಮೌಲ್ಯ ಬಿತ್ತುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಅನೇಕ ಮೌಲ್ಯಗಳುಳ್ಳ ಸಣ್ಣ ಕಥೆಗಳನ್ನು ಸರಳವಾಗಿ ತಿಳಿಯುವಂತೆ ರಚಿಸಿ ಮಕ್ಕಳ ಸಾಹಿತ್ಯದ ಜನಕರೆನಿಸಿಕೊಂಡ ಪಂಜೆ ಮಂಗೇಶರಾಯರ ಕೊಡುಗೆ ಅವಿಸ್ಮರಣೀಯ ಎಂದು ಉಪನ್ಯಾಸಕ, ಲೇಖಕ ಎಚ್.ಬಿಪಾಟೀಲ ಅಭಿಮತಪಟ್ಟರು.
ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಪಂಜೆ ಮಂಗೇಶರಾಯರ 151ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಮಂಗೇಶರಾಯರು ಸಣ್ಣಕಥೆ, ಹರಟೆ, ಕಥೆ ಕವನ ಕ್ಷೇತ್ರಗಳಲ್ಲಿ ಸಾಹಿತ್ಯ ಕೃಷಿ ಮಾಡಿದ್ದಾರೆ. ಉಪಧ್ಯಾಯರಾಗಿ, ಲೇಖಕಖರಾಗಿ ಸೇವೆ ಸಲ್ಲಿಸಿದ್ದಾರೆ. ಬ್ರಿಟಿಷ್ ವಸಾಹತುಶಾಹಿಗೆ ಬಹಳ ಸ್ಪಷ್ಟವಾಗಿ ಪ್ರತಿಕ್ರಿಯಿಸಿದ ಕನ್ನಡ ಕವಿಗಳಲ್ಲಿ ಪ್ರಮುಖರಾಗಿದ್ದಾರೆ. ಇವರು ಅನೇಕ ಕೃತಿಗಳನ್ನು ರಚಿಸಿ, ಪ್ರಶಸ್ತಿ, ಪುರಷ್ಕಾರಕ್ಕೆ ಭಾಜನರಾಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥ ಬಸವರಾಜ ಮಳ್ಳಿ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಶಿಕ್ಷಕಿ ಸೋನಿಯಾ ಸರಡಗಿ ಹಾಗೂ ವಿದ್ಯಾರ್ಥಿಗಳು ಇದ್ದರು.