Site icon ಸುದ್ದಿ ಸಂಗ್ರಹ

ದೇಶದ ನಾಗರಿಕರ ರಕ್ಷಣೆ ಅಗತ್ಯ

ಕಲಬುರಗಿ: ದೇಶದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ರಕ್ಷಣೆ ಮಾಡಬೇಕು. ಭೂಕಂಪ, ನೆರೆ ಹಾವಳಿ, ಸಾಂಕ್ರಾಮಿಕ ಕಾಯಿಲೆಗಳ ಸಂದರ್ಭದಲ್ಲಿ ನಾಗರಿಕರನ್ನು ರಕ್ಷಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಸಮಾಜ ಸೇವಕ ಚನ್ನಬಸಪ್ಪ ಸಿ ಗಾರಂಪಳ್ಳಿ ಹೇಳಿದರು.

ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ‘ವಿಶ್ವ ನಾಗರಿಕ ರಕ್ಷಣೆ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ದೇಶವಾಸಿಗಳು ಕಷ್ಟದ ಸ್ಥಿತಿಯಲ್ಲಿ ಸರ್ಕಾರದ ನೆರವಿನ ಜೊತೆ ಸಹಾಯ ಹಸ್ತ ಚಾಚಬೇಕು ಎಂದರು.

ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ, ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್ ಬಿರಾದಾರ, ಶಾಲೆಯ ಮುಖ್ಯ ಶಿಕ್ಷಕಿ ಸಂಗೀತಾ ಸಾಲಿ, ಶಿಕ್ಷಕರಾದ ಪೂರ್ಣಿಮಾ, ಶಿಲ್ಪಾ ಎಸ್.ಕೆ, ವರ್ಷಾರಾಣಿ, ಪ್ರೀತಿ ಜೆ.ಬಿ, ಖಮರೂನ್ನಿಸ್ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Exit mobile version