ಚಿತ್ತಾಪುರ: ಕರ್ನಾಟಕ ರಾಜ್ಯ ಸರಕಾರಿ ಗ್ರೇಡ್ -1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಘಟಕದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೇವಿಂದ್ರರೆಡ್ಡಿ ದುಗನೂರ ಆಯ್ಕೆಯಾಗಿದ್ದಾರೆ ಎಂದು ಚಿತ್ತಾಪುರ ಪ್ರಾದೇಶಿಕ ಕ್ಷೇತ್ರ ಚುನಾವಣಾಧಿಕಾರಿ ತಿಳಿಸಿದ್ದಾರೆ.
ನೂತನ ಪದಾಧಿಕಾರಿಗಳು ಆಯ್ಕೆ
ದಿಗ್ಗಾಂವ ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ದೇವಿಂದ್ರಪ್ಪ ಎನ್ ದೊರೆ (ಉಪಾಧ್ಯಕ್ಷರು), ಅಲ್ಲೂರು(ಬಿ) ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ವೆಂಕಟಪ್ಪ (ಪ್ರಧಾನ ಕಾರ್ಯದರ್ಶಿ), ಚಿತ್ತಾಪುರ ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ರಮೇಶ ಸಾಲೂಟಗಿ (ಖಜಾಂಚಿ), ಕೊಂಚೂರ ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಮಣಿಸಿಂಗ್ (ಜಂಟಿ ಕಾರ್ಯದರ್ಶಿ), ಇಂಗಳಗಿ ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕಿ ರಾಣಿ ಹಿರೇಮಠ (ಸಂಘಟನಾ ಕಾರ್ಯದರ್ಶಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.