ಸಂಸದ ತೇಜಸ್ವಿ ಸೂರ್ಯ ಹೇಳಿಕೆ ಹಿಂಪಡೆಯಲು ಒತ್ತಾಯ

ರಾಜ್ಯ

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ಹೂಗುಚ್ಛಗಳು ನ್ಯಾಷನಲ್‌ ವೇಸ್ಟ್‌ ಎಂಬ ಹೇಳಿಕೆ ನೀಡಿರುವುದು ಸರಿಯಲ್ಲ. ಅವರು ತಮ್ಮ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ ಅರವಿಂದ್‌ ಒತ್ತಾಯಿಸಿದ್ದಾರೆ.

ತೇಜಸ್ವಿ ಸೂರ್ಯ ಅವರು ತಮ್ಮ ಮದುವೆಯ ಅರತಕ್ಷತೆಗೆ ಫೇಸ್‌ಬುಕ್‌ ಲೈವ್‌ ಮೂಲಕ ಸಾರ್ವಜನಿಕರನ್ನು ಆಹ್ವಾನಿಸುವ ಸಂದರ್ಭದಲ್ಲಿ ಹೂಗುಚ್ಛಗಳು ನ್ಯಾಷನಲ್‌ ವೇಸ್ಟ್‌, ಅವುಗಳನ್ನು ನೀಡುವುದು ಬೇಡವೆಂದು ಮನವಿ ಮಾಡಿದ್ದರು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅರವಿಂದ್ ಪತ್ರಿಕಾ ಹೇಳಿಕೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಹೂವುಗಳಿಗೆ ಹಿಂದೂ ಸಂಸ್ಕೃತಿಯಲ್ಲಿ ಬಹಳ ಮಹತ್ವದ ಸ್ಥಾನವಿದೆ. ದೇವರ ಪೂಜೆಗೆ ಹೂವುಗಳನ್ನು ಅರ್ಪಿಸುವುದು ಹಾಗೂ ಶುಭ ಸಂದರ್ಭಗಳಲ್ಲಿ ನೈಸರ್ಗಿಕ ಹೂವುಗಳನ್ನು ನೀಡುವುದು ಶ್ರೇಷ್ಠ ಎಂಬ ನಂಬಿಕೆ ಇದೆ. ತಾವು ಉಡುಗೊರೆಯನ್ನು ಬೇಡ ಎಂದು ಹೇಳುವುದು ಸರಿ. ಆದರೆ ಹೂಗೂಚ್ಛಗಳನ್ನು ‘ನ್ಯಾಷನಲ್‌ ವೇಸ್ಟ್‌’ ಎನ್ನುವ ಪದ ಪ್ರಯೋಗದಿಂದ ಲಕ್ಷಾಂತರ ರೈತರ ಶ್ರಮದ ಫಲಕ್ಕೆ ಧಕ್ಕೆಯಾಗುತ್ತದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *