ವಾಡಿ: ಪಟ್ಟಣದ ಬಸ್ ನಿಲ್ದಾಣ ಹತ್ತಿರದ ಶಕ್ತಿ ಆಂಜನೇಯ ಮಂದಿರದಲ್ಲಿ ಬಿಜೆಪಿ ಮುಖಂಡರು ಹೋಳಿ ಹಬ್ಬದ ಪ್ರಯುಕ್ತ ಪೂಜೆ ಸಲ್ಲಿಸಿ, ಪರಸ್ಪರ ಬಣ್ಣ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ, ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಮುಖಂಡರಾದ ಶರಣಗೌಡ ಚಾಮನೂರ, ಅರ್ಜುನ ಕಾಳೆಕರ, ಯಂಕಮ್ಮ ಗೌಡಗಾಂವ, ನಿರ್ಮಲ ಇಂಡಿ, ಶರಣಮ್ಮ ಯಾದಗಿರಿ, ಮಲ್ಲಿಕಾರ್ಜುನ ಸಾತಖೇಡ, ಅನಿಲ ಕುಮಾರ ನಿರಡಗಿ, ಬಸವರಾಜ ಪಗಡಿಕರ್, ಅಂಬ್ರೇಷ ಕಡದಾಳ, ರಾಘವೇಂದ್ರ ಪಗಡಿಕರ್, ವಿಜಯ ಸುತ್ರಾವೆ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.