ಜಲ ಸಂರಕ್ಷಣೆ ರಾಷ್ಟ್ರೀಯ ಆಂದೋಲನ, ಪ್ರತ್ಯೇಕ ಪಠ್ಯವಾಗಲಿ

ಜಿಲ್ಲೆ

ಕಲಬುರಗಿ: ಜಲ ಎಂಬುದು ಕೇವಲ ಎರಡು ಅಕ್ಷರದ ಶಬ್ದವಲ್ಲ, ಅದು ಸಕಲ ಜೀವಿಗಳ ಉಸಿರು, ಅಸ್ತಿತ್ವಕ್ಕೆ ಕಾರಣವಾಗಿದೆ. ವಿವಿಧ ಕಾರಣಗಳಿಂದ ಜಲ ಸಂಪತ್ತಿನ ಕೊರತೆಯಾಗುವುದರ ಜೊತೆಗೆ ಪರಿಸರ ಅಸಮತೋಲನವಾಗುತ್ತಿದೆ. ಜಲ ಸಂರಕ್ಷಣೆ ಸರ್ಕಾರ, ಕೆಲವು ವ್ಯಕ್ತಿ, ಸಂಘ-ಸAಸ್ಥೆಗಳ ಜವಾಬ್ದಾರಿಯಾಗಿರದೆ, ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಜಲ ಸಂರಕ್ಷಣೆಯ ಕಾರ್ಯ ರಾಷ್ಟಿçÃಯ ಆಂದೋಲನದ ರೂಪದಲ್ಲಿ ಜರುಗುವುದರ ಜೊತೆ ಪ್ರತ್ಯೇಕ ಪಠ್ಯವಾಗಬೇಕಾಗಿದೆ ಎಂದು ಉಪನ್ಯಾಸಕ, ಸಮಾಜ ಸೇವಕ ಎಚ್.ಬಿ ಪಾಟೀಲ ಮಾರ್ಮಿಕವಾಗಿ ಹೇಳಿದರು.

ನಗರದ ಹಳೆ ಜೇವರ್ಗಿ ರಸ್ತೆಯ ಪಿ&ಟಿ ಕ್ವಾಟರ್ಸ್ ಎದುರುಗಡೆಯ ಸದಾಶಿವ ನಗರದಲ್ಲಿ ವಿಜಯ ಕಂಪ್ಯೂಟರ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ವಿಶ್ವ ಜಲ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಜಲಸಂಪತ್ತು ಹಾಳಾಗದಂತೆ ತಡೆದು, ಅದನ್ನು ಮುಂದಿನ ಪೀಳಿಗೆಗೆ ಲಭ್ಯವಾಗುವಂತೆ ಮಾಡಬೇಕಾಗಿದೆ. ಭೂಮಂಡಲದಲ್ಲಿ ಒಟ್ಟು ಬಳಕೆಗೆ ಲಭ್ಯತೆಯ ನೀರಿನ ಪ್ರಮಾಣ ತುಂಬಾ ಕಡಿಮೆಯಿದ್ದು, ಅದರ ಸದ್ಭಳಕೆಯಾಗಬೇಕು ಎಂದರು.

ಅರಣ್ಯನಾಶ, ಅತಿಯಾದ ಅಂತರ್ಜಲ ಬಳಕೆ, ಪರಿಸರ ಮಾಲಿನ್ಯ, ಅವೈಜ್ಞಾನಿಕ ನೀರಿನ ಬಳಕೆ, ಮಾನವನ ದುರಾಸೆಯಂತಹ ಮುಂತಾದ ಕಾರಣಗಳಿಂದ ಇದು ಬರಿದಾಗುತ್ತಿದ್ದು, ಇದು ಹೀಗಿಯೇ ಮುಂದುವರೆದರೆ ಕೆಲವು ವರ್ಷಗಳಲ್ಲಿ ‘ನೀರಿಗಾಗಿ ಮೂರನೇ ವಿಶ್ವಯುದ್ಧ’ ಜರುಗಿದರೆ ಆಶ್ವರ್ಯಪಡಬೇಕಾಗಿಲ್ಲ ಎಂದು ಆತಂಕ ವ್ಯಕ್ತಪಡಿಸುತ್ತಾ, ಎಲ್ಲರು ನೀರಿನ ಸಂರಕ್ಷಣೆ ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಶಿಕ್ಷಕಿ ವೈಶಾಲಿ ಯಲಸತ್ತಿ, ಪ್ರಮುಖರಾದ ವಿರೇಶ್ ಗಚ್ಚಿ, ಅವಮ್ಮ ಪಾಟೀಲ, ಶೃತಿ ಬಿರಾದಾರ, ಗೋವಿಂದ ಪವಾರ್, ಕಾವೇರಿ ಪೂಜಾರಿ, ಸಾವಿತ್ರಿ ಪೂಜಾರಿ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *