ಬೆಂಗಳೂರು: ಸಿಎಂ ಸಚಿವಾಲಯದ ಕರ್ತವ್ಯದಿಂದ 30 ಸಿಬ್ಬಂದಿಯನ್ನು ಬಿಡುಗಡೆ ಮಾಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 30 ಸಿಬ್ಬಂದಿಯನ್ನು ಕರ್ತವ್ಯದಿಂದ ತೆಗೆದುಹಾಕಲಾಗಿದೆ. ನಿನ್ನೆ ಮಧ್ಯಾಹ್ನದಿಂದ 30 ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಸರ್ಕಾರದ ಸಹಾಯಕರು, ಕಿರಿಯ ಸಹಾಯಕರು ದಲಾಯತ್ ಹುದ್ದೆಯಲ್ಲಿದ್ದವರು ಸೇವೆಯಿಂದ ವಜಾಗೊಂಡಿದ್ದಾರೆ.
ಈ ಬಗ್ಗೆ ಸಿಎಂ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದೆ. 30 ಗುತ್ತಿಗೆ ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ, ಅವರ ಸೇವೆ ಅವಶ್ಯಕತೆ ಇಲ್ಲದ ಕಾರಣ ಕರ್ತವ್ಯದಿಂದ ಏಕಾಏಕಿ ತೆಗೆದುಹಾಕಲಾಗಿದೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ 30 ಸಿಬ್ಬಂದಿಗೆ ನಿನ್ನೆ ಮಧ್ಯಾಹ್ನದಿಂದ ಕೆಲಸಕ್ಕೆ ಬಾರದಂತೆ ಸೂಚಿಸಲಾಗಿದೆ.

ಸಿಎಂ ಸಚಿವಾಲಯದ ಕರ್ತವ್ಯದಿಂದ 30 ಸಿಬ್ಬಂದಿ ವಜಾ
ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೆಳಗಾವಿ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಸಿಬ್ಬಂದಿ ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಅವರಲ್ಲಿ 30 ಜನರನ್ನು ನಿನ್ನೆ ವಜಾಗೊಳಿಸಲಾಗಿದೆ.