ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರ ನುಡಿ ನಮನ ನಾಳೆ

ತಾಲೂಕು

ಚಿತ್ತಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾಪುರ ವತಿಯಿಂದ ಏಪ್ರಿಲ್ 8 ರಂದು ಮಂಗಳವಾರ (ನಾಳೆ) ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ಸಿದ್ದರಾಜ ಮಲ್ಕಂಡಿ ತಿಳಿಸಿದ್ದಾರೆ.‌

ಆತ್ಮೀಯ ಸ್ನೇಹಿತರು, ಮಾರ್ಗದರ್ಶಕರು,‌ ಪ್ರೋತ್ಸಾಹದಾಯಕರು, ಸಾಹಿತಿಗಳು, ಲೇಖಕರು, ಶಿಕ್ಷಣ ಪ್ರೇಮಿಗಳು, ಪತ್ರಕರ್ತರಾಗಿದ್ದ ದಿ.ನಾಗಯ್ಯ ಸ್ವಾಮಿ ಅಲ್ಲೂರು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ನುಡಿ ನಮನ ಸಲ್ಲಿಸಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ದಿ.8 ರಂದು ಬೆಳಗ್ಗೆ 10 ಗಂಟೆಗೆ ಚಿತ್ತಾಪುರ ಪಟ್ಟಣದಲ್ಲಿನ ಅಕ್ಕಮಹಾದೇವಿ ಮಂದಿರದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ತಾಲೂಕಿನ ಎಲ್ಲಾ ರಾಜಕೀಯ ಪಕ್ಷಗಳ ಗಣ್ಯರು, ಜನಪ್ರತಿನಿಧಿಗಳು, ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸರ್ಕಾರಿ ನೌಕರವರ್ಗದವರು, ಶಿಕ್ಷಕರು, ಎಲ್ಲಾ ಸಂಘಟನೆಗಳ ಪದಾಧಿಕಾರಿಗಳು, ಪತ್ರಕರ್ತರ ಹಿತೈಷಿಗಳು, ಅಭಿಮಾನಿಗಳು ಬಿಡುವ ಮಾಡಿಕೊಂಡು ಪತ್ರಕರ್ತರ ಸಂಘದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *