ಮಾತೃ ಶಕ್ತಿ ಬೃಹತ್ ಮಹಿಳಾ ಜಾಥಾದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿ

ಜಿಲ್ಲೆ

ಕಲಬುರಗಿ: ಡಾ.ಬಿ.ಆರ್ ಅಂಬೇಡ್ಕರ್ ಇಂಟಿಗ್ರೇಟೆಡ್ ರಿಸರ್ಚ್ ಇನಸ್ಟಿಟ್ಯೂಟ್, ಬಸವೇಶ್ವರ ಸಮಾಜ ಸೇವಾ ಬಳಗ, ಕಲ್ಯಾಣ ಕರ್ನಾಟಕ ಸೇನೆ, ಸ್ಲಂ ಜನಾಂದೋಲನದ ಜಿಲ್ಲಾ ಘಟಕ, ಕೆಎಚ್‌ಬಿ ಗ್ರೀನ್ ಪಾರ್ಕ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಶಾಲಾ-ಕಾಲೇಜುಗಳು, ಸಂಘ-ಸಂಸ್ಥೆಗಳು, ಮಹಿಳಾ ಸಂಘಗಳ ವತಿಯಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರರ 134ನೇ ಜಯಂತಿ ಪ್ರಯುಕ್ತ ‘ಮಾತೃ ಶಕ್ತಿ’ ಬೃಹತ್ ಮಹಿಳಾ ಜಾಥಾದಲ್ಲಿ ಎಲ್ಲರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ಡಾ.ಸುನೀಲಕುಮಾರ ಎಚ್ ವಂಟಿ ಮತ್ತು ಎಚ್.ಬಿ ಪಾಟೀಲ ಹೇಳಿದರು.

ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪ್ಲೆಕ್ಸ್ ಎದುರುಗಡೆಯ ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್’ನಲ್ಲಿ ಏರ್ಪಡಿಸಿದ್ದ ಜಾಥಾದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳಾ ಅಸ್ಮಿತೆಗೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಕೊಡುಗೆ ಅಪಾರವಾಗಿದ್ದು, ಇದನ್ನು ಪ್ರಚಾರಪಡಿಸುವ ಉದ್ದೇಶ ಜಾಥಾದಾಗಿದೆ. ದಿ.14ರ ಬೆ.9 ಗಂಟೆಗೆ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತದಿಂದ ಪ್ರಾರಂಭಗೊಂಡು ಜಗತ್ ವೃತ್ತದ ಡಾ.ಬಾಬಾಸಾಹೇಬರ್ ಪುತ್ತಳಿಯವರೆಗೆ ಜರುಗುತ್ತದೆ. ವಿವಿಧ ಧಾರ್ಮಿಕ ಮುಖಂಡರು, ವಿದ್ವಾಂಸರು, ಚಿಂತಕರು ಆಗಮಿಲಿದ್ದಾರೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ನಾಗರಿಕರು, ಅದರಲ್ಲೂ ವಿಶೇಷವಾಗಿ ಮಹಿಳೆಯರು, ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರು ಭಾಗವಹಿಸಬೇಕು ಎಂದು ಕೋರಿದ್ದಾರೆ.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಪ್ರೊ.ಹಣಮಂತರಾಯ ಗುಡ್ಡೆವಾಡ್, ಸಮಾಜ ಸೇವಕರಾದ ಶಿವಯೋಗೆಪ್ಪಾ ಎಸ್ ಬಿರಾದಾರ, ಅಸ್ಲಾಂ ಶೇಖ್, ಸುಜಯ್ ಎಸ್ ವಂಟಿ, ಉಮೇಶ್ ಪಾಳಾ ಹಾಗೂ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *