ಕಲಬುರಗಿ: ಗ್ಯಾಸ್ ಕಟರ್ ಬಳಸಿ ಕಳ್ಳರು ಎಟಿಎಂನಿಂದ 18 ಲಕ್ಷ ರೂ. ಕದ್ದೊಯಿದಿರುವ ಘಟನೆ ಕಲಬುಗರಿಯ ರಾಮನಗರದ ಬಳಿ ಇರುವ SBI ATM ನಲ್ಲಿ ನಡೆದಿದೆ.
ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬ್ಯಾಂಕ್ ಸಿಬ್ಬಂದಿ ATM ಗೆ ಹಣ ಹಾಕಿ ಹೋಗಿದ್ದರು. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ATM ನಲ್ಲಿ ಸೆಕ್ಯೂರಿಟಿ ಇಲ್ಲದನ್ನು ಗಮನಿಸಿದ ಖದೀಮರು ಕನ್ನ ಹಾಕಿದ್ದಾರೆ.
ಕಳ್ಳರು ATM ನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಿಗೆ ಬ್ಲಾಕ್ ಸ್ಪ್ರೆ ಮಾಡಿ ಗ್ಯಾಸ್ ಕಟ್ಟರ್‌ನಿಂದ ATM ಮೆಷಿನ್ ಒಡೆದಿದ್ದಾರೆ. ಬಳಿಕ ATM ನಲ್ಲಿದ್ದ 18 ಲಕ್ಷ ರೂ. ಹಣವನ್ನು ದೋಚಿ ಪರಾರಿಯಾಗಿದ್ದಾರೆ.
ಖದೀಮರು ಐ20 ಕಾರಿನಲ್ಲಿ ಬಂದು ATM ದರೋಡೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ, ATM ಬಳಿ ಐ20 ಕಾರು ನಿಂತಿರುವ ದೃಶ್ಯವು ATM ಪಕ್ಕದಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.