ಚಿತ್ತಾಪುರ: ಏ.19 ರಂದು ಮಧ್ಯಾಹ್ನ 1 ಗಂಟೆಗೆ ಬಸವ ಜಯಂತಿ ಪ್ರಯುಕ್ತ ಪೂರ್ವಭಾವಿ ಸಭೆ ಕರೆಯಲಾಗಿದೆ, ಆದ್ದರಿಂದ ಮಹಾಸಭಾದ ಸರ್ವ ಪದಾಧಿಕಾರಿಗಳು ಮತ್ತು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ ಹೇಳಿದರು.
ಪಟ್ಟಣದ ಶರಣಬಸವೇಶ್ವರ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.29 ರಂದು ಕಲಬುರಗಿಯಲ್ಲಿ ಜರುಗುವ ಬಸವ ಜಯಂತಿ ಪ್ರಯುಕ್ತ ಪಟ್ಟಣದ ಶರಣಬಸವೇಶ್ವರ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದೆ, ಸಭೆಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಶರಣಕುಮಾರ ಮೋದಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ, ಜಯಂತಿ ಸಮಿತಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಎಂ.ವೈ ಪಾಟೀಲ, ಆಳಂದ ಶಾಸಕ ಬಿ.ಆರ್ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ ಪಾಟೀಲ, ಶಶೀಲ್ ನಮೋಶಿ, ಮಾಜಿ ಶಾಸಕರಾದ ಅಮರನಾಥ ಪಾಟೀಲ, ದೊಡ್ಡಪ್ಪಗೌಡ ಪಾಟೀಲ ಆಗಮಿಸಲಿದ್ದಾರೆ ಎಂದರು.
ಏ.16 ರಂದು ಸಂಜೆ 7.30 ಕ್ಕೆ ನಡೆಯುವ ಉಡಿ ತುಂಬುವ ಕಾರ್ಯಕ್ರಮಕ್ಕೆ ನಾಲವಾರದ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯರು, ಶರಣಬಸವೇಶ್ವರ ಸಂಸ್ಥಾನ ಮಠದ ಮಾತೋಶ್ರೀ ಡಾ.ದಾಕ್ಷಾಯಣಿ ಎಸ್ ಅಪ್ಪ, ಬೆಳಗುಂಪಾದ ಪರ್ವತೇಶ್ವರ ಶಿವಾಚಾರ್ಯರು ಆಗಮಿಸಲಿದ್ದಾರೆ.
ಏ.17 ರಂದು ಸಂಜೆ ಶರಣಬಸವೇಶ್ವರ ರಥೋತ್ಸವ ನಡೆಯಲಿದೆ. ನಂತರ ಚೆನ್ನವೀರ ಬೆಳಗುಂಪಾ ಅವರ ತಂಡದಿಂದ ಹಾಸ್ಯ ರಸಮಂಜರಿ ಜರುಗುವದು. ಆದ್ದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಬಸವ ಜಯಂತಿ ಪ್ರಯುಕ್ತ ಪ್ರತಿ ವರ್ಷ ನಡೆಯುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಈ ವರ್ಷ ವಧು ವರರು ಬರದ ಕಾರಣ ಈ ವರ್ಷ ಸಾಮೂಹಿಕ ವಿವಾಹ ಕಾರ್ಯಕ್ರಮ ಇರುವುದಿಲ್ಲ.
ಸುದ್ದಿಗೋಷ್ಠಿಯಲ್ಲಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ವಿಜಯಕುಮಾರ ದೇಶಮುಖ, ಮುಖಂಡರಾದ ರವೀಂದ್ರ ಸಜ್ಜನಶೆಟ್ಟಿ, ಮಲ್ಲರೆಡ್ಡಿ ಗೋಪಸೇನ್, ಆನಂದ ಪಾಟೀಲ ನರಿಬೋಳ, ಅನೀಲ್ ವಡ್ಡಡಗಿ, ಚಂದ್ರಶೇಖರ ಉಟಗೂರ, ಕೋಟೇಶ್ವರ ರೇಷ್ಮೆ, ಅಂಬರೀಶ್ ಸುಲೇಗಾಂವ, ಬಸವರಾಜ ಸಂಕನೂರ, ಸಂತೋಷ ಹಾವೇರಿ, ಪ್ರಸಾದ ಅವಂಟಿ, ವೀರಭದ್ರಪ್ಪ ಹುಮನಾಬಾದ, ಸೋಮಶೇಖರ ಯದಲಾಪೂರ, ಶರಣಗೌಡ ಸೂಲಹಳ್ಳಿ, ರಾಚಪ್ಪ ಬೊಮ್ಮನಳ್ಳಿ ಸೇರಿದಂತೆ ಅನೇಕರು ಇದ್ದರು.