50 ಕೋಟಿಗೆ ನಾಯಿ ಖರೀದಿ ಮಾಡಿದ್ದೆನೆ ಅಂತಿದ್ದ ಸತೀಶ್ ಮನೆ ಮೇಲೆ ಇಡಿ ದಾಳಿ: ಬಯಲಾಯ್ತು ಸತ್ಯ

ರಾಜ್ಯ

ಬೆಂಗಳೂರು: 50 ಕೋಟಿ ರೂ ಕೊಟ್ಟು ವಿಶ್ವದಲ್ಲೇ ದುಬಾರಿಯಾಗಿರುವ ಶ್ವಾನ ಖರೀದಿ ಮಾಡಿದ್ದೆನೆ ಎಂದು ಹೇಳುತ್ತಿದ್ದ ಬೆಂಗಳೂರಿನ ಶ್ವಾನ ಪ್ರೇಮಿ ಸತೀಶ್‌ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸತೀಶ್‌ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಇಡಿ ಅಧಿಕಾರಿಗಳು ಇಂದು ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಾಯಿಯ ಬೆಲೆ 50 ಕೋಟಿ ಅನ್ನೊದು ಸುಳ್ಳು ಎಂಬುದು ಗೊತ್ತಾಗಿದೆ. ಸದ್ಯ ಸ್ಥಳದಲ್ಲೆ ಬೀಡುಬಿಟ್ಟಿರುವ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.

ಸತೀಶ್‌ 50 ಕೋಟಿ ರೂ. ಕೊಟ್ಟು ಶ್ವಾನವೊಂದು ಖರೀದಿ ಮಾಡಿರುವಿದಾಗಿ ಹೇಳಿಕೊಂಡಿದ್ದರು. ಕಾಡು ತೋಳ ಮತ್ತು ಕಕೇಶಿಯನ್‌ ಶೆಫರ್ಡ್‌ ತಳಿಯ ಮಿಶ್ರಣವಾಗಿರುವ ಇದನ್ನು ತೋಳನಾಯಿ ಎಂದು ಕರೆಯುತ್ತಾರೆ.

ಸತೀಶ್‌ ಯಾರು ?
ಸತೀಶ್‌ ಬೆಂಗಳೂರಿನ ಶ್ವಾನಪ್ರಿಯರಲ್ಲಿ ಒಬ್ಬರು. ಇವರು ಹಲವು ಶ್ವಾನದಳ ತಳಿ ಸಂಘಗಳನ್ನು ಮುನ್ನಡೆಸುತ್ತಿದ್ದಾರೆ. ಹಲವು ವರ್ಷಗಳ ಹಿಂದೆಯೇ ನಾಯಿ ಸಾಕುವುದನ್ನು ಬಿಟ್ಟಿದ್ದರೂ ಆಗಾಗ್ಗೆ ಅಪರೂಪದ ನಾಯಿಗಳೊಂದಿಗೆ ಪ್ರದರ್ಶನಕ್ಕೆ ಬರುತ್ತಿರುತ್ತಾರೆ. ಅಲ್ಲದೆ ಸತೀಶ್‌ ಯಾವುದೆ ಕಾರ್ಯಕ್ರಮಕ್ಕೆ ತಮ್ಮ ಅಪರೂಪದ ಶ್ವಾನದೊಂದಿಗೆ ಹೋದರೆ ಅದಕ್ಕೆ ನಿರ್ದಿಷ್ಟ ಮೊತ್ತಕ್ಕೆ ಪಡೆದಿರುವದಾಗಿ ಈ ಹಿಂದೆ ಹೇಳಿಕೊಂಡಿದ್ದರು.

ಕಕೇಷ್ಯನ್ ಶೆಫರ್ಡ್ ವಿಶೇಷತೆ ಏನು ?
ಕ್ಯಾಡಾಬೊಮ್ಸ್ ಹೇಡರ್ ಹೆಸರಿನ ಕಕೇಷ್ಯನ್ ಶೆಫರ್ಡ್ ಶ್ವಾನವು ಬರೊಬ್ಬರಿ 100 ಕೆಜಿ ತೂಕವಿದೆ. ನೋಡಲು ಸಿಂಹದಂತೆ ಕಾಣುವ ಈ ಶ್ವಾನದ ತಲೆಬುರುಡೆ ಗಾತ್ರವು 38 ಇಂಚುಗಳಿದ್ದು, ಭುಜಗಳು 34 ಇಂಚುಗಳಿವೆ. ಅಲ್ಲದೇ ಶ್ವಾನದ ಕಾಲುಗಳು 2 ಲೀಟರ್ ಜ್ಯೂಸ್ ಬಾಟಲಿ ಗಾತ್ರದಷ್ಟು ದೊಡ್ಡದಾಗಿದೆ.

ಕ್ಯಾಸ್ಪಿಯನ್ ಮತ್ತು ಕಪ್ಪು ಸಮುದ್ರ ಮಧ್ಯೆ ಇರುವ ಕಕೇಷ್ಯಾ ಪ್ರಾಂತ್ಯದ ಬಳಿ ಇರುವ ಕಕೇಷಿಯನ್ ಶೆಫರ್ಡ್ ಶ್ವಾನ ಜಾನುವಾರುಗಳ ರಕ್ಷಣೆಗೆ ನೋಡಿಕೊಳ್ಳಲು ಸಾಕುತ್ತಾರೆ. ಈ ತಳಿಯ ಶ್ವಾನವು ಜಾರ್ಜಿಯಾ, ಅರ್ಮೇನಿಯಾ, ಅಜೆರ್ಬೈಜಾನ್, ಒಸ್ಸೆಟಿಯಾ, ಸರ್ಕಾಸಿಯಾ, ಟರ್ಕಿ, ರಷ್ಯಾ ಮತ್ತು ಡಾಗೆಸ್ತಾನ್ ದೇಶಗಳಲ್ಲಿ ಕಾಣಸಿಗುತ್ತವೆ. ಭಾರತ ದೇಶದಲ್ಲಿ ನೋಡಲು ಸಿಗೋದು ಅಪರೂಪ ಎಂದು ಸತೀಶ್ ಈ ಹಿಂದೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು.

Leave a Reply

Your email address will not be published. Required fields are marked *