ಚಿತ್ತಾಪುರ: ಪಟ್ಟಣದ ಹಳೆಯ ಕೋರ್ಟ್ ಎದುರುಗಡೆಯ ಲಕ್ಷ್ಮಿ ಅಟೋ ಮೊಬೈಲ್ ಅಂಗಡಿ ಸಮೀಪ ಅಪರಿಚಿತ ವ್ಯಕ್ತಿಯ ಕೊಲೆಯಾದ ವಿಷಯ ತಿಳಿಯುತ್ತಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಅಡಿಶನಲ್ ಎಸ್ಪಿ ಮಹೇಶ ಮೇಘಣ್ಣವರ್, ಡಿವೈಎಸ್ಪಿ ಶಂಕರಗೌಡ ಪಾಟೀಲ, ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್‌ಐ ಶ್ರೀಶೈಲ್ ಅಂಬಾಟಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಇದ್ದರು.
ಘಟನೆಯ ಬಗ್ಗೆ ತಿಳಿಯುತ್ತಲೇ ಪತ್ತೆ ಕಾರ್ಯ ಕೈಗೊಳ್ಳಲಾಗಿದೆ, ಲಾಡ್ಡಿಂಗ್ ಕ್ರಾಸ್ ಸಮೀಪದ ಎಲ್ಲಾ ಸಿಸಿ ಕ್ಯಾಮೆರಾಗಳನ್ನು ಪರೀಶೀಲಿಸಲಾಯಿತು, ಅನುಮಾನಾಸ್ಪದ ವ್ಯಕ್ತಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಕೊಲೆಯಾದ ವ್ಯಕ್ತಿಯ ಬಗ್ಗೆ ಇದುವರೆಗೆ ಯಾವುದೆ ಸುಳಿವು ಸಿಕ್ಕಿಲ್ಲ ಎಂದು ಪಿಎಸ್‌ಐ ಶ್ರೀಶೈಲ್ ಅಂಬಾಟಿ ತಿಳಿಸಿದ್ದಾರೆ.