ಕನ್ನಡ ನಾಡಿಗೆ ಡಾ.ರಾಜಕುಮಾರ ಕೊಡುಗೆ ಅನನ್ಯ

ಜಿಲ್ಲೆ

ಕಲಬುರಗಿ: ನಾಡಿನ ಪ್ರಸಿದ್ಧ ವ್ಯಕ್ತಿಯಾಗಿ, ಮೇರು ನಟ, ಗಾಯಕ, ಕನ್ನಡಪರ ಚಳುವಳಿಯ ಹೋರಾಟಗಾರರಾಗಿ, ಸಮಾಜ ಸೇವಕರಾಗಿ ಐದು ದಶಕಗಳ ಕಾಲ ತಮ್ಮದೆಯಾದ ಅಮೂಲ್ಯ ಸೇವೆ ಸಲ್ಲಿಸಿ ಜನಮಾನಸದಲ್ಲಿ ‘ಅಣ್ಣಾವ್ರ’ ಸ್ಥಾನ ಪಡೆದ ‘ಬಂಗಾರದ ಮನುಷ್ಯ’ ಡಾ.ರಾಜಕುಮಾರ ಅವರದು ಬಹುಮುಖ ವ್ಯಕ್ತಿತ್ವ. ಕನ್ನಡ ನಾಡಿಗೆ ಅವರ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.

ನಗರದ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಜರುಗಿದ ‘ನಟಸಾರ್ವಭೌಮ ಡಾ.ರಾಜಕುಮಾರ್ ಅವರ 97ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಡಾ.ರಾಜಕುಮಾರ ಅವರು ಹೃದಯ ಶ್ರೀಮಂತರಾಗಿದ್ದರು. ಬಡವರಪರ, ಕನ್ನಡ ನಾಡು, ನುಡಿಗೆ ಸಂಬಂಧಿಸಿದಂತೆ ಅವರಲ್ಲಿರುವ ಕಾಳಜಿ ಶ್ಲಾಘನೀಯ. ನಟ ಸಾರ್ವಭೌಮರಾಗಿ, ಗೌರವ ಡಾಕ್ಟರೇಟ್, ಕರ್ನಾಟಕ ರತ್ನ, ಪದ್ಮಭೂಷಣ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ದೊರೆತಿರುವದು ನಮ್ಮ ನಾಡಿಗೆ ಸಂದ ಗೌರವವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥ ದತ್ತು ಹಡಪದ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್ ಬಿರಾದಾರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *