SSLC ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ

ರಾಜ್ಯ

ಬೆಂಗಳೂರು: ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ಮಧ್ಯಾಹ್ನ 12.30ಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಲಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಎಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ದಿ: 21 ಮಾರ್ಚ್ 2025 ರಿಂದ 04 ಎಪ್ರಿಲ್ 2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ.

ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿ.2 ಮೇ 2025 ರಂದು ಬೆಳಿಗ್ಗೆ 11-30ಕ್ಕೆ ಕರ್ನಾಟಕ ಶಾಲಾ ವರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ

ವಿದ್ಯಾರ್ಥಿಗಳು ತಮ್ಮ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ನಿಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ…..ಈ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿ.2 ಮೇ 2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.

Leave a Reply

Your email address will not be published. Required fields are marked *