ಚೆನ್ನೈ: ಮೈಲಾಡುತುರೈನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಡಿಎಂಕೆ ಸಂಸದ ಎ ರಾಜಾ ಅವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಪಕ್ಷದ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿರುವಾಗ ಗಾಳಿ ಬೀಸುತ್ತಿತ್ತು. ಈ ವೇಳೆ ಬಲವಾದ ಗಾಳಿಯಿಂದಾಗಿ ವೇದಿಕೆಯ ಬಳಿ ಓವರ್ಹೆಡ್ ಫೋಕಸ್ ದೀಪಗಳು ಕುಸಿದು ಬಿದ್ದು ಡಯಾಜ್ ಮೇಲೆ ಬಿದ್ದಿದೆ.
ಫೋಕಸ್ ದೀಪಗಳು ಬೀಳುವುದನ್ನು ನೋಡಿದ ರಾಜಾ ಅವರು ತಮ್ಮ ಎಡಗಡೆ ಸರಿದ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ. ಒಂದು ವೇಳೆ ಅವರು ಭಾಷಣ ಮಾಡುತ್ತಲೇ ಇರುತ್ತಿದ್ದರೆ ಗಾಯಗೊಳ್ಳುವ ಸಾಧ್ಯತೆ ಇತ್ತು. ಓವರ್ಹೆಡ್ ಫೋಕಸ್ ದೀಪಗಳು ಕುಸಿದು ಡಯಾಜ್ ಮೇಲೆ ಬೀಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಜನ್ಮದಿನ ಮತ್ತು ರಾಜ್ಯಪಾಲರ ವಿಷಯದಲ್ಲಿ ಪಕ್ಷದ ಕಾನೂನು ವಿಜಯ ಆಚರಿಸಲು ಡಿಎಂಕೆ ಈ ಕಾರ್ಯಕ್ರಮ ಆಯೋಜಿಸಿತ್ತು.