ಕಲಬುರಗಿ: ಅ.ನ ಕೃಷ್ಣರಾವ ಅವರು ಕನ್ನಡ ಪ್ರಗತಿಶೀಲ ಸಾಹಿತ್ಯದ ಪ್ರವರ್ತಕರು. ಕನ್ನಡಪರ ಹೋರಾಟಗಾರರಾಗಿದ್ದರು. ಕನ್ನಡ ಸಾಹಿತ್ಯಕ್ಕೆ ವಿಶೇಷ ಕಾದಂಬರಿಗಳು ನೀಡಿದ ಅವರು ‘ಕಾದಂಬರಿ ಸಾರ್ವಭೌಮ’ರಾಗಿದ್ದಾರೆ ಎಂದು ಲೇಖಕ ಶಿವಯೋಗೆಪ್ಪಾ ಎಸ್ ಬಿರಾದಾರ ಹೇಳಿದರು.
ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಅ.ನ ಕೃಷ್ಣರಾವ ಅವರ 117ನೇ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ ಎಚ್.ಬಿ ಪಾಟೀಲ, ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ, ಶಿಕ್ಷಕಿಯರಾದ ಪೂರ್ಣಿಮಾ ಪಾಟೀಲ, ಪ್ರೀತಿ ಸಣಮನಿ ಹಾಗೂ ವಿದ್ಯಾರ್ಥಿಗಳು ಇದ್ದರು.