ಚಿತ್ತಾಪುರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಭಾರಿ ಶೆಲ್ ದಾಳಿಯಲ್ಲಿ ಆಂಧ್ರ ಪ್ರದೇಶದ ಸೈನಿಕ ಮುರಳಿ ನಾಯಕ್ ಹುತಾತ್ಮರಾಗಿದ್ದಾರೆ, ಈ ಹಿನ್ನೆಲೆಯಲ್ಲಿ ಪಟ್ಟಣದ ಚಿತಾವಲಿ ವೃತ್ತದಿಂದ ಸಂಜೆ ಕ್ಯಾಂಡಲ್ ಮಾರ್ಚ್ ಮೆರವಣಿಗೆ ಕಪಡಾ ಬಜಾರ್, ಜನತಾ ವೃತ್ತ, ಭುವನೇಶ್ವರಿ ವೃತ್ತ, ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣದ ರಸ್ತೆ, ಬಸವೇಶ್ವರ ವೃತ್ತದ ಮೂಲಕ ಲಾಡ್ಜಿಂಗ್ ಕ್ರಾಸ್ ಸಮೀಪ ಸಮಾವೇಶಗೊಂಡು ಒಂದು ನಿಮಿಷ ಮೌನಾಚರಣೆ ಮಾಡಿ ಮೃತಯೋಧರ ಆತ್ಮಕ್ಕೆ ಶಾಂತಿ ಕೋರಲಾಯಿತು.
ಪುರಸಭೆ ಸದಸ್ಯ ಜಗದೀಶ್ ಡಿ ಚವ್ಹಾಣ ಮಾತನಾಡಿ, ಚಿಕ್ಕ ವಯಸ್ಸಿನಲ್ಲಿಯೆ ದೇಶ ಸೇವೆಗೆ ಸೇರಿ, ಶತ್ರು ದೇಶದೊಂದಿಗೆ ಹೋರಾಡುವಾಗ ಪ್ರಾಣ ತ್ಯಾಗ ಮಾಡಿದ ವೀರಯೋಧನ ಅಗಲಿಕೆ ಭಾರತಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಮತ್ತು ಅವರ ಕುಟುಂಬ ವರ್ಗದವರಿಗೆ, ಬಂಧು-ಮಿತ್ರರಿಗೆ ದುಖಃ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಬಂಜಾರ ಸಮಾಜದ ಗೌರವಾಧ್ಯಕ್ಷ ಗೋಪಾಲ ರಾಠೋಡ, ಸೇವಾಲಾಲ್ ಜಗದಂಬಾ ದೇವಸ್ಥಾನದ ಅಧ್ಯಕ್ಷ ಶ್ರೀಕಾಂತ ರಾಠೋಡ, ಮುಖಂಡರಾದ ಚಂದರ್ ಚವ್ಹಾಣ, ವಿಠ್ಠಲ್ ಕಟ್ಟಿಮನಿ, ಶಿವರಾಮ ಚವ್ಹಾಣ, ಸಂತೋಷ ರಾಠೋಡ, ಆಕಾಶ್ ಚವ್ಹಾಣ, ರಾಜು ಚವ್ಹಾಣ, ರಾಜು ರಾಠೋಡ, ಸಂಜಯ ಬುಳಕರ್, ಗೋಪಿ ಚವ್ಹಾಣ, ರಾಜು ರಾಠೋಡ, ಜಗದೀಶ ಪವಾರ, ವಿಶ್ವನಾಥ ರಾಠೋಡ, ಸುನೀಲ್ ರಾಠೋಡ, ಆನಂದ ಜಾಧವ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.