ಬಳ್ಳಾರಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ವಾತಾವರಣ ಹಿನ್ನೆಲೆ ದಕ್ಷಿಣ ಕಾಶಿ, ಯುನೆಸ್ಕೋ ವಿಶ್ವಪಾರಂಪರಿಕ ತಾಣ ಹಂಪಿಯ ಮೇಲೆ ಕೇಂದ್ರ, ರಾಜ್ಯ ಸರ್ಕಾರ ವಿಶೇಷ ನಿಗಾವಹಿಸಿದ್ದು, ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಹಂಪಿಗೆ ಬರುವ ಎಲ್ಲಾ ವಾಹನಗಳ ತಪಾಸಣೆ ಮಾಡಲಾಗುತ್ತಿದ್ದು, ಪ್ರತಿಯೊಬ್ಬ ಪ್ರವಾಸಿಗನ ಪರಿಶೀಲನೆ ನಡೆಸಲಾಗುತ್ತಿದೆ. ಜೊತೆಗೆ ಹಂಪಿಗೆ ಬರುವ ಮಾರ್ಗಗಳಲ್ಲಿ 4 ಚೆಕ್’ಪೊಸ್ಟಳನ್ನು ನಿರ್ಮಾಣ ಮಾಡಲಾಗಿದೆ. 24 ಗಂಟೆಗಳ ಕಾಲ ಎರಡು ಚೆಕ್‌ಪೊಸ್ಟ್ ಕಾರ್ಯ ನಿರ್ವಹಿಸುತ್ತಿದ್ದು, ಕಲ್ಲಿನ ತೇರಿನ ಬಳಿ ಹಗಲು ಹೊತ್ತಿನಲ್ಲಿ ಚೆಕ್‌ಪೊಸ್ಟ್ ಕಾರ್ಯನಿರ್ವಹಿಸುತ್ತಿದೆ.
ಪೊಲೀಸರು ಗಸ್ತು ವಾಹನಗಳ ಸಂಖ್ಯೆ ಹೆಚ್ಚಿಸಿದ್ದು, ತಪಾಸಣೆಗಾಗಿ 4 ಮೆಟಲ್ ಡಿಟೆಕ್ಟರ್ ಅಳವಡಿಸಿದ್ದಾರೆ. ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರ ತಪಾಸಣೆ ಮಾಡುವಂತೆ ಕೇಂದ್ರ, ರಾಜ್ಯ ಸರ್ಕಾರ ಸೂಚನೆ ನೀಡಿದೆ, ಹೆಚ್ಚಿನ ಭದ್ರತೆ ನೀಡಲಾಗಿದೆ.