ರಾವೂರ: ಮೇ‌.27 ರಂದು ಬಸವೇಶ್ವರ ಮೂರ್ತಿ ಅನಾವರಣ

ಸುದ್ದಿ ಸಂಗ್ರಹ ವಿಶೇಷ

ರಾವೂರ: ಮೇ.27ರಂದು ಗ್ರಾಮದ ಬಸವೇಶ್ವರ ವೃತ್ತದಲ್ಲಿ ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ ಸಮಾರಂಭ ನಡೆಯಲಿದೆ ಎಂದು ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ ಸಮಿತಿ ತಿಳಿಸಿದೆ.

ಅಂದು ಸಂಜೆ 4 ಗಂಟೆಗೆ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದಿಂದ ವಿವಿಧ ಕಲಾ ತಂಡಗಳೊಂದಿಗೆ ಬಸವೇಶ್ವರ ಮೂರ್ತಿ ಮೆರವಣಿಗೆ ನಡೆಯಲಿದೆ. ಸಂಜೆ 6.30ಕ್ಕೆ ರಾವೂರ ಸಿದ್ದಲಿಂಗ ಮಹಾಸ್ವಾಮಿಗಳ ನೇತೃತ್ವದಲ್ಲಿ ಬಸವೇಶ್ವರ ಮೂರ್ತಿ ಅನಾವರಣಗೊಳ್ಳುವದು. ಸೊನ್ನದ ಪೂಜ್ಯ ಶಿವಾನಂದ ಸ್ವಾಮಿ, ಮುಗುಳನಾಗಾವಿಯ ಅಭಿನವ ಸಿದ್ದಲಿಂಗ ಶಿವಾಚಾರ್ಯರು, ಚಿತ್ತಾಪುರದ ಸೋಮಶೇಖರ ಶಿವಾಚಾರ್ಯರು ಸಾನಿಧ್ಯ ವಹಿಸುವರು.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐಟಿಬಿಟಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾoಕ್ ಖರ್ಗೆ ಕಾರ್ಯಕ್ರಮ ಉದ್ಘಾಟಿಸುವರು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ ಷಟಸ್ಥಳ ದ್ವಜಾರೋಹಣ ಮಾಡುವರು, ಶಾಸಕ ಎಂ.ವೈ ಪಾಟೀಲ ಬಸವ ಪುಷ್ಪಾರ್ಚನೆ ಮಾಡುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಬಸವರಾಜ ಮತ್ತಿಮುಡ, ಶಶಿಲ್ ನಮೋಶಿ, ಬಿ.ಜಿ ಪಾಟೀಲ, ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಶರಣು ಮೋದಿ, ತಾಲೂಕ ಅಧ್ಯಕ್ಷ ನಾಗರಾಜ ಬಂಕಲಗಿ ಉಪಸ್ಥಿತರಿರುವರು ಎಂದು ಸಮಿತಿಯ ಪ್ರಮುಖರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *