ಶಹಾಪುರ: ಯಾರಾದರೂ ನಾವು ಲೋಕಾಯುಕ್ತರು ಎಂದು ನಿಮ್ಮ ಮೊಬೈಲ್’ಗೆ ಕರೆ ಮಾಡಿದಲ್ಲಿ ಪ್ರತ್ಯುತ್ತರ ನೀಡಬೇಡಿ. ತಕ್ಷಣವೇ ನಮ್ಮ ಕಾರ್ಯಾಲಯಕ್ಕೆ ತಿಳಿಸಿದಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತೆವೆ ಎಂದು ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್ ಇನಾಮದಾರ ಹೇಳಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾಹಿತಿ ನೀಡಿದ ಅವರು, ಸಂಬಂಧಪಟ್ಟ ಇಲಾಖೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಲ್ಲದೆ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾನೂನು ವ್ಯಾಪ್ತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಉಮಾಕಾಂತ ಹಳ್ಳೆ, ಪಿಐ ಸಿದ್ದರಾಮ ಬಳೂರಗಿ ಉಪಸ್ಥಿತರಿದ್ದರು.