ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ನೌಕರರ ಸಂಘ ಖಂಡನೆ

ಜಿಲ್ಲೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್‌ ಅವರ ಬಗ್ಗೆ ಇತ್ತೀಚೆಗೆ ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ ಅವರ ಅವಹೇಳನಕಾರಿ ಹೇಳಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕ
ತೀವ್ರವಾಗಿ ಖಂಡಿಸಿದೆ.

ಈ ರೀತಿಯ ಹೇಳಿಕೆಯಿಂದ ಸರ್ಕಾರಿ ಅಧಿಕಾರಿ-ನೌಕರರ ಆತ್ಮಸ್ಥೆರ್ಯ ಕುಸಿಯುವಂತಾಗುತ್ತದೆ. ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್‌ ಅವರು ಜಿಲ್ಲೆಯ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *