ಕಲಬುರಗಿ: ಮಹಾಸಾದ್ವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 603ನೇ ಜಯಂತ್ಯೋತ್ಸವ ಆಚರಣೆ ಮತ್ತು ರೆಡ್ಡಿ ಸಮಾಜದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಶರಣಬಸಪ್ಪ ಕಾಮರೆಡ್ಡಿ ತಿಳಿಸಿದ್ದಾರೆ.
ನಗರದ ಖೂಬಾ ಕಲ್ಯಾಣ ಮಂಟಪದಲ್ಲಿ ಜೂ.1 ರಂದು ಬೆಳಿಗ್ಗೆ 11 ಗಂಟೆಗೆ ಮಹಾಸಾದ್ವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 603ನೇ ಜಯಂತ್ಯೋತ್ಸವ ಆಚರಣೆ ಮತ್ತು ರೆಡ್ಡಿ ಸಮಾಜದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ.