ಕಲಬುರಗಿ: ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ 2025-26ನೇ ಶೈಕ್ಷಣಿಕ ಸಾಲಿನ ಕಾಲೇಜು ಪ್ರಾರಂಭೋತ್ಸವ ಅತ್ಯಂತ ಸಂಭ್ರಮ- ಸಡಗರದಿಂದ ಸೋಮವಾರ ಜರುಗಿತು. ತಳಿರು-ತೋರಣಗಳಿಂದ ಅಲಂಕರಿಸಿ, ರಂಗೋಲಿ ಬಿಡಿಸಿ, ಎಲ್ಲಾ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ, ಸಿಹಿ ವಿತಿರಿಸಿ, ಆತ್ಮೀಯವಾಗಿ ಸ್ವಾಗತಿಸಲಾಯಿತು.
ಕಾಲೇಜಿನ ವತಿಯಿಂದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡ ಕಾಲೇಜಿನ ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ ಮಾತನಾಡಿ, ನಮ್ಮ ಕಾಲೇಜು ಜೇವರ್ಗಿ ತಾಲೂಕಿನಲ್ಲಿ ಅತ್ಯಂತ ಹಿರಿಯ ಕಾಲೇಜಾಗಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮುನ್ನುಡಿ ಬರೆದಿದೆ. ಗುಣಮಟ್ಟದ ಬೋಧನೆ, ಸಂಪೂರ್ಣ ಮೂಲಭೂತ ಸೌಕರ್ಯ ಹೊಂದಿದೆ. ವಿಜಯಪುರ ಕ್ರಾಸ್‌ನ ಹೆದ್ದಾರಿಗೆ ಹೊಂದಿಕೊಂಡಿರುವುದರಿಂದ ವಿದ್ಯಾರ್ಥಿಗಳ ಸಂಚಾರಕ್ಕೆ ತುಂಬಾ ಅನಕೂಲಕರವಾಗಿದೆ. ಹಸಿರು ವಾತಾವರಣದ ಕಾಲೇಜಿನ ಪರಿಸರ, ಡಿಜಿಟಲ್ ತರಗತಿ, ರಾಜ್ಯ ಮಟ್ಟದ ಸಂಪನ್ಮೂಲ ಉಪನ್ಯಾಸಕ ವರ್ಗ ಹೊಂದಿದೆ. ತಾಲೂಕಿನ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಹೆಚ್ಚಿನ ಮಟ್ಟದಲ್ಲಿ ಪ್ರವೇಶ ಪಡೆದು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಅಸ್ಮಾ ಜಬೀನ್, ಮಲ್ಲಿಕಾರ್ಜುನ ದೊಡ್ಡಮನಿ, ಸುವರ್ಣಲತಾ ಭಂಡಾರಿ, ಶಂಕ್ರೆಪ್ಪ ಹೊಸದೊಡ್ಡಿ, ಎಚ್.ಬಿ ಪಾಟೀಲ, ಮಲ್ಲಪ್ಪ ರಂಜಣಗಿ, ಕೀರ್ತಿ ಭುಜುರಕೆ, ದುಂಡಪ್ಪ ಯರಗೋಳ್, ಗ್ರಂಥಪಾಲಕ ಲಿಂಗರಾಜ ಹಿರೇಗೌಡ್, ಶಿಕ್ಷಣ ಪ್ರೇಮಿ ಬಸವರಾಜ ಹಡಪದ, ಪ್ರ.ದ.ಸ ಪ್ರೇಮಾ ಸುರಪುರ, ಪಾಲಕರಾದ ಚಂದ್ರಾಮಪ್ಪ, ಬನಸಿದ್ದ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.