ಚಿತ್ತಾಪುರ: ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಪುರಸಭೆ ಸದಸ್ಯ ಜಗದೀಶ ಚವ್ಹಾಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಜಗದೀಶ್ ಚವ್ಹಾಣ ಅವರನ್ನು ಅವಿರೋಧವಾಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಸ್ಥಾಯಿ ಸಮಿತಿಯ ಸದಸ್ಯರಾಗಿ ಸುಮಂಗಲಾ ಸಣ್ಣೂರಕರ್, ಬೇಬಿ ಸುಭಾಷ್ ಜಾಧವ, ಶಹನಾಜ್ ಬೇಗಂ ಮಹ್ಮದ್ ಯಕ್ಬಾಲ್, ಪ್ರಭು ಗಂಗಾಣಿ ಅವರನ್ನು ಆಯ್ಕೆ ಮಾಡಲಾಯಿತು.
ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಸ್ಥಾಯಿ ಸಮಿತಿ ನೂತನ ಅಧ್ಯಕ್ಷ ಹಾಗೂ ಸದಸ್ಯರಿಗೆ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಚಂದ್ರಶೇಖರ ಕಾಶಿ, ನಾಗರಾಜ ಭಂಕಲಗಿ, ವಿನೋದ ಗುತ್ತೇದಾರ, ಶ್ರೀನಿವಾಸರೆಡ್ಡಿ ಪಾಲಪ್, ಸಂತೋಷ ಚೌದರಿ, ಮುಖಂಡರಾದ ರವಿ ರಾಠೋಡ, ನೀಲಕಂಠ ಪವಾರ, ಶಂಕರ ಚೋಕ್ಸಾ ಶಿವರಾಮ ಚವ್ಹಾಣ, ಜಗದೀಶ್ ಪವಾರ, ವಿನೋದ ರಾಠೋಡ ಸೇರಿದಂತೆ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.