ಜಾನ್ಸಿ ರಾಣಿ ಲಕ್ಷ್ಮಿಬಾಯಿ ಧೀರ ಸ್ವಾತಂತ್ರ್ಯ ಹೋರಾಟಗಾರ್ತಿ

ಜಿಲ್ಲೆ

ಕಲಬುರಗಿ: ನಮ್ಮ ದೇಶದ ಸ್ವಾತಂತ್ರ್ಯಕ್ಕೆ ಅನೇಕ ಮಹನೀಯರು ಹೋರಾಡಿದ್ದಾರೆ. ಮಹಿಳೆಯಾಗಿ ಅತ್ಯಂತ ಧೀರ, ಶೂರತನದಿಂದ ಹೋರಾಟ ಮಾಡುವ ಮೂಲಕ ಜಾನ್ಸಿ ರಾಣಿ ಲಕ್ಷ್ಮಿಬಾಯಿಯವರು ಮಹಿಳಾ ಲೋಕಕ್ಕೆ ಮಾದರಿಯಾಗಿದ್ದಾರೆ ಎಂದು ಎಚ್.ಬಿ ಪಾಟೀಲ ಹೇಳಿದರು.

ನಗರದ ಆಳಂದ ರಸ್ತೆಯ ಶಿವ ನಗರದ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಜಾನ್ಸಿ ರಾಣಿ ಲಕ್ಷ್ಮಿಬಾಯಿಯವರ 167ನೇ ಸ್ಮರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಿಂದಲೇ ಇಂತಹ ಮಹನೀಯರ ಬಗ್ಗೆ ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥ ಅಮರ ಜಿ.ಬಂಗರಗಿ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಮುಖ್ಯ ಶಿಕ್ಷಕಿ ಚಂಪಾಕಲಾ ನೆಲ್ಲುರೆ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *